ಮಂಗಳವಾರ, ಸೆಪ್ಟೆಂಬರ್ 21, 2021
24 °C

ಸಿಟಿಓ ವೃತ್ತದ ಸಿಗ್ನಲ್‌ನಲ್ಲೇ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಬ್ಬನ್‌ ಪಾರ್ಕ್ ಮೆಟ್ರೊ ನಿಲ್ದಾಣ ಎದುರಿನ ಸಿಟಿಓ ವೃತ್ತದ ಸಿಗ್ನಲ್‌ನಲ್ಲಿ ನಿಂತಿದ್ದ ಕಾರಿನ ಚಾಲಕನ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡಲಾಗಿದ್ದು, ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೀಕೆರೆಯ ಹೇಮಾಂಶು ಮೋಟಾ ಎಂಬುವರು ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಸೋಮವಾರ ಬೆಳಿಗ್ಗೆ 9ರ ಸುಮಾರಿಗೆ ಹೇಮಾಂಶು, ಕಾರಿನಲ್ಲಿ ಸಿಟಿಓ ವೃತ್ತಕ್ಕೆ ಬಂದಿದ್ದರು. ಕೆಂಪು ಸಿಗ್ನಲ್‌ ಇದ್ದಿದ್ದರಿಂದ ಕಾಯುತ್ತ ನಿಂತಿದ್ದರು. ಅದೇ ವೇಳೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು, ‘ನಿಮ್ಮ ಕಾರಿನಿಂದ ದಟ್ಟಣೆ ಉಂಟಾಗುತ್ತಿದೆಮುಂದಕ್ಕೆ ಹೋಗಿ’ ಎಂದು ಹೇಳಿ ಗಮನ ಬೇರೆಡೆ ಸೆಳೆದು ಕಿಟಕಿ ಮೂಲಕ ಮೊಬೈಲ್ ಕದ್ದುಕೊಂಡು ಹೋಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು