ಶನಿವಾರ, ಫೆಬ್ರವರಿ 27, 2021
30 °C

ಕಬ್ನನ್ ಪಾರ್ಕ್: ವಾಹನ ನಿರ್ಬಂಧಿಸದ ಅಧಿಕಾರಿಗಳಿಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಕುರಿತು ನ್ಯಾಯಾಲಯ ನೀಡಿರುವ ಆದೇಶ ಪರಿಗಣಿಸಿಲ್ಲ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಆಧರಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.

‘ವಾಹನ ಸಂಚಾರ ನಿರ್ಬಂಧಿಸುವ ಬಗ್ಗೆ ಭೂಸಾರಿಗೆ ನಿರ್ದೇಶನಾಲಯದ ಶಿಫಾರಸುಗಳನ್ನು ಅಧಿಕಾರಿಗಳು ಪರಿಗಣಿಸಿಲ್ಲ. ಈ ಇಬ್ಬರು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿಯೇ ನ್ಯಾಯಾಲಯಕ್ಕೆ ಅವಿಧೇಯತೆ ತೋರಿಸಿದ್ದಾರೆ’ ಎಂದು ಕಬ್ಬನ್ ಪಾರ್ಕ್ ನಡಿಗೆದಾರರ ಸಂಘಟನೆ ಅರ್ಜಿಯಲ್ಲಿ ಆರೋಪಿಸಿದೆ.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ನೋಟಿಸ್ ನೀಡಲು ಆದೇಶಿಸಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು