ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬನ್ ಪಾರ್ಕ್: ಕಟ್ಟಡ ನಿರ್ಮಾಣಕ್ಕೆ ತಡೆ

Last Updated 25 ಜನವರಿ 2021, 21:01 IST
ಅಕ್ಷರ ಗಾತ್ರ

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ಎರಡು ಕಟ್ಟಡಗಳ ನಿರ್ಮಾಣ ಮತ್ತು ಅದರಲ್ಲಿ ವಾಸ್ತವ್ಯಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಅಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ನಿರ್ಮಾಣವಾಗಿರುವ ಕಟ್ಟಡದಲ್ಲಿ ವಾಸ್ತವ್ಯ ಹೂಡದಂತೆ ಹಾಪ್‌ಕಾಮ್ಸ್‌ಗೆ ಮತ್ತು ನಿರ್ಮಾಣ ಕಾರ್ಯ ನಿಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನಿರ್ದೇಶನ ನೀಡಿತು.

‘2001ರ ಆಗಸ್ಟ್ 13ರಂದು ಹೈಕೋರ್ಟ್ ಹೊರಡಿಸಿರುವ ಆದೇಶದ ಪ್ರಕಾರ, ಯಾವುದೇ ನಿರ್ಮಾಣ ಕಾರ್ಯಕ್ಕೂ ನ್ಯಾಯಾಲಯದ ಅನುಮತಿ ಪಡೆಯಬೇಕು. ಆದರೆ, ಅನುಮತಿ ಇಲ್ಲದೆ ಕಾಮಗಾರಿ ನಡೆಸಲಾಗುತ್ತಿದೆ’ ಎಂದು ಅರ್ಜಿದಾರರು ದೂರಿದ್ದರು.

‘ಉದ್ಯಾನದ ಗಡಿಗಳನ್ನು ಹೊಸದಾಗಿ ಗುರುತಿಸುವ ಅಧಿಸೂಚನೆ ಹೊರಡಿಸಲಾಗಿದೆ. ಉಲ್ಲೇಖಿತ ಕಟ್ಟಡಗಳು ಉದ್ಯಾನ ಪ್ರದೇಶದಿಂದ ಹೊರಗಿವೆ’ ಎಂದು ಸರ್ಕಾರ ವಿವರಣೆ ಸಲ್ಲಿಸಿತು.

ಮುಂದಿನ ಎಲ್ಲಾ ನಿರ್ಮಾಣಗಳು ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿವೆ ಎಂದು ತಿಳಿಸಿದ ಪೀಠ, ಮಾ.2ಕ್ಕೆ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT