ಶುಕ್ರವಾರ, ಆಗಸ್ಟ್ 19, 2022
27 °C

ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಾಹನ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಕಬ್ಬನ್ ಉದ್ಯಾನದಲ್ಲಿ ವಾಹನಗಳ ಸಂಚಾರಕ್ಕೆ ಬುಧವಾರದಿಂದ ಅನುಮತಿ ನೀಡಲಾಯಿತು.

ಕೊರೊನಾ ಕಾರಣಕ್ಕೆ ಉದ್ಯಾನದ ಪ್ರವೇಶದ್ವಾರಗಳನ್ನು ಮುಚ್ಚಿ, ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಪರಿಸರವಾದಿಗಳು ಹಾಗೂ ವಾಯುವಿಹಾರಿಗಳು ವಾಹನ ಸಂಚಾರ ಸಂಪೂರ್ಣ ನಿಷೇಧಿಸುವಂತೆ ಮೌನ ಪ್ರತಿಭಟನೆ ನಡೆಸುತ್ತಿದ್ದರು.

ವಾಹನ ಸಂಚಾರ ನಿರ್ಬಂಧಿಸುವಂತೆ ಪಾಲಿಕೆ, ತೋಟಗಾರಿಕೆ ಇಲಾಖೆ ಸಚಿವ ನಾರಾಯಣಗೌಡ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ, ವಾಹನ ದಟ್ಟಣೆ ತಗ್ಗಿಸಲು ಉದ್ಯಾನದಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡುವಂತೆ ಸಂಚಾರ ಪೊಲೀಸರು ತೋಟಗಾರಿಕೆ ಇಲಾಖೆಗೆ ಮನವಿ ಮಾಡಿದ್ದರು.

'ಸರ್ಕಾರದ ಸೂಚನೆ ಮೇರೆಗೆ ಉದ್ಯಾನದಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ' ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ (ಕಬ್ಬನ್) ಗುಣವಂತ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು