ಸೋಮವಾರ, ಆಗಸ್ಟ್ 15, 2022
22 °C
ಕಳಪೆ ಕಾಮಗಾರಿಯ ಆರೋಪ

ಕಬ್ಬನ್‌: ಕುಸಿದು ಬಿದ್ದ ಆಶ್ರಯ ಮಂಟಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ಆಶ್ರಯ ಪಡೆಯಲು ನಿರ್ಮಿಸಲಾಗಿದ್ದ ಕಿರು ಮಂಟಪ ಇತ್ತೀಚೆಗೆ ಕುಸಿದು ಬಿದ್ದಿದೆ. ಕಳಪೆ ಕಾಮಗಾರಿಯಿಂದ ಈ ಘಟನೆ ಸಂಭವಿಸಿದೆ ಎಂದು ಕಬ್ಬನ್‌ಪಾರ್ಕ್‌ ನಡಿಗೆದಾರರ ಸಂಘ ಆರೋಪಿಸಿದೆ.

ಉದ್ಯಾನಕ್ಕೆ ಬರುವವರು ಕುಳಿತುಕೊಳ್ಳಲು ಹಾಗೂ ಮಳೆಗಾಲದಲ್ಲಿ ಆಶ್ರಯ ಪಡೆಯಲು ಅನುಕೂಲವಾಗುವಂತೆ ತೋಟಗಾರಿಕೆ ಇಲಾಖೆ ವತಿಯಿಂದ 2015ರಲ್ಲಿ ₹10 ಲಕ್ಷ ವೆಚ್ಚದಲ್ಲಿ ಈ ಮಂಟಪಗಳನ್ನು ನಿರ್ಮಿಸಲಾಗಿತ್ತು. 

‘ಮಳೆ ಬಂದಾಗ ಆಶ್ರಯ ಪಡೆದುಕೊಳ್ಳಲು ಮಂಟಪ ನೆರವಾಗುತ್ತಿತ್ತು. ಇತ್ತೀಚೆಗೆ ಒಂದು ಮಂಟಪ ಕುಸಿದು ಬಿದ್ದಿದೆ. ಜನರಿಲ್ಲದ ವೇಳೆ ಕುಸಿದಿರುವುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಲಕ್ಷಗಟ್ಟಲೆ ಖರ್ಚು ಮಾಡಿ ನಿರ್ಮಿಸಿರುವ ಮಂಟಪ ಕುಸಿಯುತ್ತದೆ ಎಂದರೆ ಕಳಪೆ ಕಾಮಗಾರಿ ಎಂದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಬಗ್ಗೆ ತನಿಖೆ ನಡೆಯಬೇಕು’ ಎಂದು ಕಬ್ಬನ್‌ಪಾರ್ಕ್‌ ನಡಿಗೆದಾರರ ಸಂಘದ ಅಧ್ಯಕ್ಷ ಎಸ್.ಉಮೇಶ್ ಆಗ್ರಹಿಸಿದರು.

ಈ ಸಂಬಂಧ ಹೆಚ್ಚಿನ ಮಾಹಿತಿ ಪಡೆಯಲು ಉದ್ಯಾನದ ತೋಟಗಾರಿಕೆ ಇಲಾಖೆಯ ಅಧಿಕಾರಿ ಸಂಪರ್ಕಕ್ಕೆ ಸಿಗಲಿಲ್ಲ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.