ಬೆಂಗಳೂರು: ‘ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ, ವಿನಯವಂತಿಕೆ, ಸ್ವಯಂ ಪ್ರಜ್ಞೆ ಬೆಳೆಸಿಕೊಳ್ಳಬೇಕು’ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಕಿವಿಮಾತು ಹೇಳಿದರು.

ನಗರದ ಸಿಎಂಆರ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 2025–26ನೇ ಸಾಲಿನ ವಿವಿಧ ವಿಷಯಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಉದ್ಘಾಟನೆ ಮತ್ತು ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ತಪ್ಪುಗಳಿಂದ ಕಲಿಯುವಂತಹ ಒಳ್ಳೆಯ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಈ ಕಾರ್ಯಕ್ರಮ ಮೌಲ್ಯಯುತ ಶಿಕ್ಷಣದ ಪಯಣಕ್ಕೆ ಮಾರ್ಗದರ್ಶನ ನೀಡುವ ದಿಕ್ಸೂಚಿಯಾಗಿದೆ’ ಎಂದು ತಿಳಿಸಿದರು.

ಸಿಎಂಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಕೆ.ಸಿ. ರಾಮಮೂರ್ತಿ, ‘ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದೊಂದಿಗೆ ಕಲಿಯಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ ಹಾಗೂ ಸೃಜನಾತ್ಮಕ ಪ್ರತಿಭೆಯಿದ್ದರೆ ಜಾಗತಿಕ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬಹುದು’ ಎಂದರು. ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಎಚ್.ಬಿ.ರಾಘವೇಂದ್ರ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಪ್ರವೀಣ್ ಆರ್., ಕುಲಸಚಿವ ಧನಂಜಯ ಎಂ., ಶಿಕ್ಷಣ ವಿಭಾಗಗಳ ಡೀನ್ ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.