ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಕೃತಿ ಸಚಿವಾಲಯ: ವಿದ್ಯಾರ್ಥಿ ವೇತನಕ್ಕೆ ಅದಿತಿ ಆಯ್ಕೆ

Published 14 ಜುಲೈ 2023, 15:31 IST
Last Updated 14 ಜುಲೈ 2023, 15:31 IST
ಅಕ್ಷರ ಗಾತ್ರ

ಬೆಂಗಳೂರು: ಸಂಸ್ಕೃತಿ ಸಚಿವಾಲಯದ ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ ನಡೆಸಿದ ಯುವ ಪ್ರತಿಭಾ ಶೋಧದಲ್ಲಿ ಇಲ್ಲಿನ ಜಾನಪದ ಹಾಗೂ ಯಕ್ಷಗಾನ ಕಲಾವಿದೆ ಅದಿತಿ ಉರಾಳ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕುಂದಾಪುರದ ಕೋಟ ಗ್ರಾಮದ ಉರಾಳದವರಾಗಿದ್ದಾರೆ. ಯಕ್ಷಗಾನ ಕಲಾವಿದ, ಕಲಾಕದಂಬ ಆರ್ಟ್ ಸೆಂಟರ್ ಸಾಂಸ್ಕೃತಿಕ ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಉರಾಳ ಹಾಗೂ ಶಿಕ್ಷಕಿ ಮಮತಾ ಉರಾಳ ಅವರ ಮಗಳಾಗಿದ್ದು, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಜಾನಪದ, ರಂಗಭೂಮಿ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಇವರು ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT