ಶನಿವಾರ, ಡಿಸೆಂಬರ್ 5, 2020
25 °C

ಮಸಾಜ್ ಉಪಕರಣದಲ್ಲಿದ್ದ ಬಾಕ್ಸ್‌ನಲ್ಲಿ ₹1.20 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂತರರಾಷ್ಟ್ರೀಯ ಅಂಚೆ ಮೂಲಕ ಸಾಗಿಸುತ್ತಿದ್ದ ₹ 1.20 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಲಾಗಿದ್ದು, ಆರೋಪಿಗಳ ಪತ್ತೆಗೆ ಕಸ್ಟಮ್ಸ್ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಂಚೆ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದ ಅಧಿಕಾರಿಳು, ಅಂಚೆ ಪಾರ್ಸೆಲ್‌ನಲ್ಲಿ ಡ್ರಗ್ಸ್ ಇರುವುದನ್ನು ಪತ್ತೆ ಮಾಡಿದ್ದಾರೆ.

‘ಖಚಿತ ಮಾಹಿತಿ ಮೇರೆಗೆ ಅಂತರರಾಷ್ಟ್ರೀಯ ಅಂಚೆ ಕಚೇರಿಯಲ್ಲಿ ಬುಧವಾರ ಪರಿಶೀಲನೆ ನಡೆಸಲಾಯಿತು. ‘ಕಾಲು ಮಸಾಜ್ ಮಾಡುವ ಉಪಕರಣ’ ಎಂದು ನಮೂದಿಸಿದ್ದ ಬಾಕ್ಸ್‌ಗಳನ್ನು ಬಿಚ್ಚಿ ನೋಡಲಾಯಿತು. ಅಲ್ಲಿಯೇ ಎಂಡಿಎಂಎ ಡ್ರಗ್ಸ್ ಮಾತ್ರೆಗಳು ಸಿಕ್ಕವು’ ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ಹೇಳಿದರು.

‘ನಗರದ ಕೆಲವರು, ಅಂತರರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಮೂಲಕ ಅಂಚೆಯಲ್ಲಿ ನಗರಕ್ಕೆ ಡ್ರಗ್ಸ್ ತರಿಸುತ್ತಿದ್ದರೆಂಬ ಮಾಹಿತಿ ಇದೆ. ಪಾರ್ಸೆಲ್ ಮೇಲಿರುವ ವಿಳಾಸ ಆಧರಿಸಿ ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು