ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಅಕ್ರಮ ಸಾಗಣೆ: 23 ಐ–ಫೋನ್‌ ವಶ

Last Updated 23 ಅಕ್ಟೋಬರ್ 2022, 21:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 23 ಐ–ಫೋನ್‌ಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯಿಂದ ₹ 34.47 ಲಕ್ಷ ಮೌಲ್ಯದ 23 ಐ-ಫೋನ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಶನಿವಾರ ಬ್ಯಾಂಕಾಕ್‌ನಿಂದ ನಗರಕ್ಕೆ ಪ್ರಯಾಣಿಕರೊಬ್ಬರು ತಮ್ಮ ಲಗೇಜ್‌ನಲ್ಲಿ ಐ–ಫೋನ್‌ ಸಾಗಾಟ ಮಾಡುತ್ತಿದ್ದ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಸಿಕ್ಕಿತ್ತು. ಬಂದಿಳಿಯುತ್ತಿದ್ದಂತೆ ಆರೋಪಿಯನ್ನು ವಶಕ್ಕೆ ಪಡೆದು,ಪರಿಶೀಲನೆ ನಡೆಸಲಾಯಿತು ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT