ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನ ನಿಲುಗಡೆ ನಿರ್ಬಂಧ

Published 11 ನವೆಂಬರ್ 2023, 23:30 IST
Last Updated 11 ನವೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಭಾರತ ಹಾಗೂ ನೆದರ್ಲೆಂಡ್ಸ್‌ ನಡುವಿನ ಪಂದ್ಯ ಭಾನುವಾರ ನಡೆಯಲಿದ್ದು, ಕ್ರೀಡಾಂಗಣದ ಸುತ್ತಮುತ್ತ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.

ಕ್ರೀಡಾಂಗಣದ ಸುತ್ತಮುತ್ತ ವಾಹನ ದಟ್ಟಣೆಯಾಗುವ ಸಾಧ್ಯತೆಯಿದ್ದು, ಪೊಲೀಸರು ಭದ್ರತೆ ಕೈಗೊಂಡಿದ್ದು, ಸುಗಮ ಸಂಚಾರದ ದೃಷ್ಟಿಯಿಂದ ಹಲವು ಕಡೆ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ.

ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಕ್ವೀನ್ಸ್ ರಸ್ತೆ, ಕಬ್ಬನ್ ರಸ್ತೆ, ಎಂ.ಜಿ.ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ವಿಠ್ಠಲ್ ಮಲ್ಯ ರಸ್ತೆ ಹಾಗೂ ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಕಿಂಗ್ಸ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ ಬಸ್‌ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಸಾರ್ವಜನಿಕರು ವಾಹನ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT