ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ; ಸೈಬರ್ ಕ್ರೈಂ ಠಾಣೆಗೆ ದೂರು

ಬೆಂಗಳೂರು: ‘ಭಾಸ್ಕರ್ ಪ್ರಸಾದ್ ಎಂಬುವರು ಸಾಮಾಜಿಕ ಜಾಲತಾಣಗಳಲ್ಲಿ ನನಗೆ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಿ.ನಾ. ರಾಮು, ನಗರದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
‘ಫೇಸ್ಬುಕ್ನಲ್ಲಿ ಪ್ರಚೋದನಾತ್ಮಕ ಪೋಸ್ಟ್ ಪ್ರಕಟಿಸಿರುವ ಭಾಸ್ಕರ್ ಪ್ರಸಾದ್, ನನ್ನ ಹತ್ಯೆ ಮಾಡುವುದಾಗಿ ಬೆದರಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿ ವಿರುದ್ಧ ಕ್ರಮ ಜರುಗಿಸಿ’ ಎಂದು ರಾಮು ಒತ್ತಾಯಿಸಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು, ಭಾಸ್ಕರ್ ಪ್ರಸಾದ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.