ಬೆಂಗಳೂರು: ‘ಸೈಬರ್ ದಾಳಿ ಪ್ರಕರಣಗಳನ್ನು ತನಿಖೆ ಮಾಡಲು ಮತ್ತು ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸಲು ಅಗತ್ಯವಾದ ಕೌಶಲ, ತರಬೇತಿ ಮತ್ತು ತಂತ್ರಜ್ಞಾನದ ಜತೆಗೆ ವಿಶೇಷ ಸೈಬರ್ ಅಪರಾಧ ಘಟಕಗಳನ್ನು ಸ್ಥಾಪಿಸುವ ಮೂಲಕ ರಾಜ್ಯ ಸರ್ಕಾರವು ಸೈಬರ್ ಅಪರಾಧಗಳನ್ನು ಮಟ್ಟಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಸಿಐಡಿ ಹಾಗೂ ಸೈಬರ್ ಅಪರಾಧ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ಮೂರನೇ ವರ್ಷದ ಸೈಬರ್ ಅಪರಾಧ ತನಿಖಾ ಶೃಂಗದಲ್ಲಿ ಅವರು ಮಾತನಾಡಿದರು.

‘ಕರ್ನಾಟಕವು ವಿಶ್ವದಲ್ಲೇ ಅತ್ಯಂತ ಸುರಕ್ಷಿತ ಡಿಜಿಟಲ್ ವ್ಯವಸ್ಥೆ ಹೊಂದಿದೆ. ಕರ್ನಾಟಕ ಕೇವಲ ಒಂದು ರಾಜ್ಯವಲ್ಲ. ಅದು ಜಾಗತಿಕ ಬ್ರ್ಯಾಂಡ್. ಉತ್ತಮ ಮತ್ತು ಅತ್ಯಂತ ಸುರಕ್ಷಿತ ಡಿಜಿಟಲ್ ವ್ಯವಸ್ಥೆಯನ್ನು ರಾಜ್ಯ ಹೊಂದಿದೆ’ ಎಂದರು.

‘ಎಲ್ಲ ಜಿಲ್ಲೆಗಳು ಮತ್ತು ಪ್ರಮುಖ ನಗರಗಳಲ್ಲಿ ಒಟ್ಟು 43 ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾಗರಿಕರಿಗೆ ಸೈಬರ್ ಸುರಕ್ಷತೆ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಸಿಸಿಐಟಿಆರ್ ಸ್ಥಾಪನೆಯಿಂದ ಸೈಬರ್ ಅಪರಾಧ ತನಿಖೆಯನ್ನು ಬಲಪಡಿಸಲಾಗಿದೆ. ಸಂಶೋಧನಾ ಸಾಮರ್ಥ್ಯ ವೃದ್ಧಿ ಆಗಿದೆ. ನಮ್ಮ ಪೊಲೀಸ್ ಅಧಿಕಾರಿಗಳಲ್ಲಿ ತಾಂತ್ರಿಕ ಕೌಶಲಗಳು ಹೆಚ್ಚಿವೆ. ಇದರಿಂದ ತನಿಖೆಗೂ ಸಹಕಾರಿ ಆಗಿದೆ’ ಎಂದರು.

‘ಸೈಬರ್ ಅಪರಾಧ ಪ್ರಕರಣಗಳ ನಿಯಂತ್ರಣ ಹಾಗೂ ಸೈಬರ್ ವಂಚಕರ ಪತ್ತೆಗೆ ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ನಾಗರಿಕರು, ವಿವಿಧ ಇಲಾಖೆಯ ಅಧಿಕಾರಿಗಳೂ ಸೇರಿದಂತೆ ಒಟ್ಟು 62 ಸಾವಿರ ಮಂದಿಗೆ ಇದುವರೆಗೆ ತರಬೇತಿ ನೀಡಲಾಗಿದೆ’ ಎಂದು ತಿಳಿಸಿದರು.

‘ಸೈಬರ್ ಅಪರಾಧವು ಯಾವುದೇ ಭೌಗೋಳಿಕ ಪ್ರದೇಶಕ್ಕೆ ಸೀಮಿತವಾಗಿಲ್ಲ. ಇದು ಮಿತಿಯಿಲ್ಲದ, ತಂತ್ರಜ್ಞಾನ ಆಧಾರಿತ ಮತ್ತು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಅಪರಾಧ. ಹಣಕಾಸಿನ ವಂಚನೆಗಳು ಮತ್ತು ಕ್ರಿಪ್ಟೊಕರೆನ್ಸಿ, ಡಾರ್ಕ್ವೆಬ್ ಆಧಾರಿತ ಮಾದಕವಸ್ತು ಜಾಲಗಳು ಮತ್ತು ಡೇಟಾ ಉಲ್ಲಂಘನೆಯವರೆಗೆ, ಬೆದರಿಕೆಗಳ ಪ್ರಮಾಣ ವೇಗವಾಗಿ ಹೆಚ್ಚುತ್ತಿದೆ. ಈ ಸವಾಲುಗಳನ್ನು ತಾಂತ್ರಿಕ ಸಾಮರ್ಥ್ಯದಿಂದ ಮಾತ್ರವಲ್ಲದೆ ಕಾನೂನುಗಳನ್ನು ಬಲಪಡಿಸುವ ಮೂಲಕ ಸಂಘಟನಾತ್ಮಕವಾಗಿ ಎದುರಿಸಬೇಕಿದೆ’ ಎಂದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ಸೈಬರ್ ಕಮಾಂಡ್ ಸೆಂಟರ್ನ ಡಿಜಿಪಿ ಪ್ರಣವ್ ಮೊಹಂತಿ, ಇನ್ಪೊಸಿಸ್ ಫೌಂಡೇಷನ್ ಟ್ರಸ್ಟಿ ಸುನೀಲ್ ಕುಮಾರ್ ಧಾರೇಶ್ವರ್, ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ಸಿಇಒ ವಿನಾಯಕ ಗೋಡ್ಸೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.