ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಬರ್ ಕ್ರೈಂ ಠಾಣೆ ಪಿಎಸ್‌ಐ ಆತ್ಮಹತ್ಯೆ

Last Updated 20 ಜೂನ್ 2022, 3:54 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್‌ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹನುಮಂತನಗರ ಠಾಣೆ ಪಿಎಸ್‌ಐ ಆಗಿದ್ದ ಸುದರ್ಶನ್‌ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಅವರ ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದಲ್ಲಿರುವ ಮನೆಯಲ್ಲಿ ಉಳಿದುಕೊಂಡಿದ್ದರು.’

‘ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರಿಗೆ ಮಗ ಶುಭಾಶಯ ತಿಳಿಸಿದ್ದರು. ಧನ್ಯವಾದ ತಿಳಿಸಿ ಮಗನ ಜೊತೆ ಕಾಲ ಕಳೆದಿದ್ದ ಸುದರ್ಶನ್, ಕೊಠಡಿಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಕೆಲ ಹೊತ್ತಿನ ನಂತರ ಹೊರಗೆ ಬಾರದಿದ್ದಾಗ, ಅನುಮಾನಗೊಂಡ ಮಗ ಕೊಠಡಿಗೆ ಹೋಗಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡಿದೆ’ ಎಂದೂ ತಿಳಿಸಿದರು.

‘ಸುದರ್ಶನ್ ಅವರು ಕೆಲದಿನಗಳಿಂದ ಮಾನಸಿಕವಾಗಿ ನೊಂದಿದ್ದರೆಂದು ಗೊತ್ತಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT