ಗುರುವಾರ , ಅಕ್ಟೋಬರ್ 29, 2020
22 °C

ಫ್ಯಾನ್ಸಿ ನಂಬರ್‌ ಹೆಸರಿನಲ್ಲಿ ₹65 ಸಾವಿರ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘9000000000’ ಫ್ಯಾನ್ಸಿ ಮೊಬೈಲ್ ನಂಬರ್ ಕೊಡಿಸುವುದಾಗಿ ನಂಬಿಸಿದ್ದ ವ್ಯಕ್ತಿಯೊಬ್ಬ, ಕೋರಮಂಗಲ ನಿವಾಸಿ ವಿಮಲ್‌ಕುಮಾರ್ ಎಂಬುವರಿಂದ ₹65 ಸಾವಿರ ಪಡೆದು ವಂಚಿಸಿದ್ದಾನೆ.

ಈ ಸಂಬಂಧ ವಿಮಲ್‌ಕುಮಾರ್ ದೂರು ನೀಡಿದ್ದು, ಆರೋಪಿ ಆದಿತ್ಯ ಜೈನ್ ಎಂಬಾತನ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮೊಬೈಲ್‌ಗೆ ಬಂದ ಸಂದೇಶ ನಂಬಿ ಫ್ಯಾನ್ಸಿ ನಂಬರ್ ಪಡೆಯಲು ದೂರುದಾರರು ಆರೋಪಿಯನ್ನು ಸಂಪರ್ಕಿಸಿದ್ದರು. ನಂಬರ್‌ಗೆ ಹೆಚ್ಚಿನ ಬೇಡಿಕೆ ಇರುವುದಾಗಿ ಹೇಳಿದ್ದ ಆರೋಪಿ, ಅದಕ್ಕಾಗಿ ಹಣ ಪಡೆದು ವಂಚಿಸಿ ನಾಪತ್ತೆಯಾಗಿದ್ದಾನೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು