ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಟೊ ಅಪ್‌ಲೋಡ್; ಎಂಜಿನಿಯರ್ ಸೇರಿ ಇಬ್ಬರ ಬಂಧನ

Last Updated 30 ಜುಲೈ 2020, 20:18 IST
ಅಕ್ಷರ ಗಾತ್ರ

ಬೆಂಗಳೂರು:ಯುವತಿಯರು ಹಾಗೂ ಉಪನ್ಯಾಸಕಿಯರ ಫೋಟೊಗಳನ್ನು ಕೆಟ್ಟದಾಗಿ ಬಿಂಬಿಸಿ ಸಾಮಾಜಿಕ ಜಾಲತಾಣ ಹಾಗೂ ಅಶ್ಲೀಲ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುತ್ತಿದ್ದ ಆರೋಪದಡಿ ಎಂಜಿನಿಯರ್ ಸೇರಿ ಇಬ್ಬರನ್ನು ಸಿಸಿಬಿಯ ಸೈಬರ್ ಪೊಲೀಸರು ಬಂಧಿಸಿದ್ದಾರೆ.

ಸಿ.ವಿ.ರಾಮನ್ ನಗರದ ಅಜಯ್ ತನಿಕಾಚಲಂ (37) ಹಾಗೂ ರಾಜಾಜಿನಗರದ ವಿಶ್ವಕ್ ಸೇನ್ (27) ಬಂಧಿತರು. ಆರೋಪಿಗಳಿಂದ ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆದು ಆರೋಪಿಗಳು, ಫೋಟೊ ಅಪ್‌ಲೋಡ್‌ ಮಾಡುತ್ತಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿದೆ.

'ಫೇಸ್‌ಬುಕ್, ಇನ್‌ಸ್ಟಾಗ್ರಾಂ ಹಾಗೂ ಹಲವು ಸಾಮಾಜಿಕ ಜಾಲತಾಣದಲ್ಲಿ ಯುವತಿಯರು ಹಾಗೂ ಉಪನ್ಯಾಸಕಿಯರು ತಮ್ಮ ಫೋಟೊಗಳನ್ನು ಅಪ್‌ಲೋಡ್‌ ಮಾಡುತ್ತಾರೆ. ಅಂಥ ಫೋಟೊಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳುತ್ತಿದ್ದ ಆರೋಪಿಗಳು, ಕೆಟ್ಟದಾಗಿ ಬಿಂಬಿಸಿ ಸಾಮಾಜಿಕ ಜಾಲತಾಣ ಹಾಗೂ ಅಶ್ಲೀಲ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುತ್ತಿದ್ದರು’ ಎಂದು ಸಿಸಿಬಿ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT