ಬೆಂಗಳೂರು: ‘ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾದ ಅಪರಾಧಗಳಿಗೆ ವಿಧಿಸಲಾಗುತ್ತಿರುವ ಜೈಲು ಶಿಕ್ಷೆ ಪ್ರಮಾಣವನ್ನು ಸೈಬರ್ ವಂಚಕರಿಗೂ ನೀಡುವ ಕಾನೂನು ಜಾರಿಗೆ ತರುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಎರಡು ದಿನಗಳ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶಕ್ಕೆ ಶನಿವಾರ ಚಾಲನೆ ನೀಡಿದ ನಂತರ, ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ದರೋಡೆ, ಸುಲಿಗೆ, ವಾಹನ ಕಳ್ಳತನ ಪ್ರಕರಣಗಳು 2023ರ ಬಳಿಕ ತಗ್ಗಿವೆ. ಆದರೆ, ಸೈಬರ್ ಹಾಗೂ ಡ್ರಗ್ಸ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಸೈಬರ್ ವಂಚಕರನ್ನು ಮಟ್ಟಹಾಕಲು ಕಠಿಣ ಕಾನೂನು ಜಾರಿಗೆ ತರಲು ಸಿದ್ಧತೆ ನಡೆದಿದೆ. ಡ್ರಗ್ಸ್ ನಿಯಂತ್ರಣಕ್ಕೂ ಮುಂದಿನ ಅಧಿವೇಶನದ ವೇಳೆಗೆ ಕಠಿಣ ಕಾನೂನು ರೂಪಿಸುತ್ತೇವೆ’ ಎಂದು ಹೇಳಿದರು.

ಜೈಲುಗಳಲ್ಲಿ ಅವ್ಯವಸ್ಥೆ ಹಾಗೂ ಮಾದಕ ವಸ್ತು ಜಾಲ ನಿಯಂತ್ರಣದಲ್ಲಿನ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

‘ಡ್ರಗ್ಸ್ ದಂಧೆಯಲ್ಲಿ ವಿದೇಶಿ ಪ್ರಜೆಗಳೂ ಶಾಮೀಲಾಗುತ್ತಿದ್ದಾರೆ. ಅವರು ಜಾಮೀನು ಪಡೆದು ಹೊರಬಂದ ಮೇಲೆ ರಾಜ್ಯದಲ್ಲೇ ಉಳಿದುಕೊಳ್ಳುತ್ತಿದ್ದಾರೆ. ವಿದೇಶಿ ಪ್ರಜೆಗಳನ್ನು ಮುಲಾಜಿಲ್ಲದೇ ಆಯಾ ದೇಶಕ್ಕೆ ವಾಪಸ್ ಕಳುಹಿಸಬೇಕು. ಮಾದಕ ವಸ್ತು ವ್ಯಸನಿಗಳನ್ನು ವಿಚಾರಣೆಗೆ ಒಳಪಡಿಸಿದರೆ ಡ್ರಗ್ಸ್ ಜಾಲ ಪತ್ತೆ ಹಚ್ಚಬಹುದು. ಉತ್ಪಾದಕರು, ಪೂರೈಕೆದಾರರನ್ನು ಮಟ್ಟಹಾಕಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

‘ಪೊಲೀಸರು ಜಾಗ್ರತೆಯಿಂದ ಕೆಲಸ ಮಾಡಿದಾಗ ಅನೇಕ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಿದೆ. ಎಟಿಎಂ ದರೋಡೆ, ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಗಳಲ್ಲಿ ಪೊಲೀಸರು ಸ್ವಲ್ಪ ಎಚ್ಚರಿಕೆ ವಹಿಸಿದ್ದರೂ ಘಟನೆಗಳನ್ನು ತಪ್ಪಿಸಬಹುದಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯೂ ಮುನ್ನೆಚ್ಚರಿಕೆ ವಹಿಸಿದ್ದರೆ ಅಮಾಯಕರು ಕಾಲ್ತುಳಿತದಲ್ಲಿ ಬಲಿ ಆಗುವುದನ್ನು ತಪ್ಪಿಸಲು ಸಾಧ್ಯವಿತ್ತು’ ಎಂದರು.

ಕಾನೂನು ಎಲ್ಲರಿಗೂ ಒಂದೇ. ಬಲಾಢ್ಯರು ಸಮಾಜಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬೇಡಿ. ದುರ್ಬಲರು ಪರಿಶಿಷ್ಟ ಜಾತಿಯವರು ಅಲ್ಪಸಂಖ್ಯಾತರ ರಕ್ಷಣೆ ಎಲ್ಲರ ಹೊಣೆ. ದುರ್ಬಲರಿಗೆ ಅನ್ಯಾಯವಾಗಲು ಬಿಡಬೇಡಿ
ಸಿದ್ದರಾಮಯ್ಯ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.