ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಭಾರ ಕುಸಿತ: ತಂಪೆರೆದ ಮಳೆ

Last Updated 12 ಮೇ 2021, 21:05 IST
ಅಕ್ಷರ ಗಾತ್ರ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ನಗರದ ಹಲವೆಡೆ ಬುಧವಾರ ಧಾರಾಕಾರ ಮಳೆಯಾಯಿತು.

ರಾಜರಾಜೇಶ್ವರಿ ನಗರ, ಬಿಟಿಎಂ ಬಡಾವಣೆ, ರಾಜಾಜಿನಗರ, ಮಲ್ಲೇಶ್ವರ,ಬಸವನಗುಡಿ, ಯಶವಂತಪುರ, ಕೆ.ಆರ್.ಮಾರುಕಟ್ಟೆ, ಕಾರ್ಪೊರೇಷನ್ ವೃತ್ತ, ಲಾಲ್‌ಬಾಗ್, ಶಾಂತಿನಗರ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಭಾಗಗಳಲ್ಲಿಸಂಜೆಯಿಂದಲೇ ಗಾಳಿ ಸಹಿತ ಹೆಚ್ಚು ಮಳೆ ಸುರಿಯಿತು.

ರಾತ್ರಿವರೆಗೆ ಬಿಟ್ಟು ಬಿಟ್ಟು ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ಹರಿಯಿತು. ಲಾಕ್‌ಡೌನ್‌ ಇದ್ದಿದ್ದರಿಂದ ಹೆಚ್ಚು ವಾಹನಗಳು ರಸ್ತೆಯಲ್ಲಿ ಸಂಚರಿಸಲಿಲ್ಲ. ಆದರೆ, ತುರ್ತು ಅಗತ್ಯಗಳಿಗಾಗಿ ಹೊರಬಂದಿದ್ದವರು ಮಳೆಯಿಂದ ಪರದಾಡಿದರು.

ಬೆಂಗಳೂರಿನಲ್ಲಿ ಸರಾಸರಿ 3 ಸೆಂ.ಮೀ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮೇ 15 ಮತ್ತು 16ರಂದು ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಎರಡೂ ದಿನ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನಇಲಾಖೆ ತಿಳಿಸಿದೆ.

‘ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.ಮೇ 17ರವರೆಗೆ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT