ಬೆಂಗಳೂರು: ಪೇಯಿಂಗ್ ಗೆಸ್ಟ್ವೊಂದರ (ಪಿ.ಜಿ) ಅಡುಗೆಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಳ್ಳಾರಿಯ ಅರವಿಂದ್ (23) ಮೃತ ಯುವಕ. ವೆಂಕಟೇಶ್, ದೇವಿ, ವಿಶಾಲ್ ಗಾಯಗೊಂಡಿದ್ದು, ಈ ಪೈಕಿ ವೆಂಕಟೇಶ್ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರೂಕ್ಫೀಲ್ಡ್ ರಸ್ತೆಯಲ್ಲಿದ್ದ ಸೆವೆನ್ ಹಿಲ್ಸ್ ಶ್ರೀಸಾಯಿ ಪಿ.ಜಿಯಲ್ಲಿ ಸಂಜೆ 6.15ಕ್ಕೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿದೆ. ಪಿ.ಜಿಯಲ್ಲಿ 52 ಮಂದಿ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ, ಸುಕೋ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

ಸ್ಫೋಟದ ತೀವ್ರತೆಗೆ ಕಟ್ಟಡ ವಿವಿಧ ಕಡೆ ಬಿರುಕು ಬಿಟ್ಟಿದೆ. ಸ್ಫೋಟದ ಶಬ್ಧ ಕೇಳಿದ ಪಿ.ಜಿ.ಯಲ್ಲಿದ್ದ ಯುವಕರು ಹೊರಗಡೆ ಓಡಿ ಹೋಗಿದ್ದಾರೆ. ಎಚ್ಎಎಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.