ಭಾನುವಾರ, ಜುಲೈ 25, 2021
21 °C
ಹುಟ್ಟುಹಬ್ಬ ಸಮಾರಂಭಕ್ಕೆ ಬಲೂನ್‌ಗೆ ಗಾಳಿ ತುಂಬುವಾಗ ದುರ್ಘಟನೆ

ಸಿಲಿಂಡರ್ ಸ್ಫೋಟ: ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಹುಟ್ಟುಹಬ್ಬ ಸಮಾರಂಭದ ಅಲಂಕಾರಕ್ಕಾಗಿ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ವೇಳೆ ಸಿಲಿಂಡರ್‌ ಸ್ಫೋಟಗೊಂಡು, ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ತಮಿಳುನಾಡಿನ ದಿನೇಶ್ ಮೃತ ಯುವಕ. ಇಲ್ಲಿನ ರಿಚ್‌ಮಂಡ್‌ ವೃತ್ತದ ಬಳಿಯ ಖಾಸಗಿ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಹುಟ್ಟುಹಬ್ಬವೊಂದರ ಆಚರಣೆಗೆ ಬಲೂನ್ ಪೂರೈಸಲು ದಿನೇಶ್ ಬಂದಿದ್ದರು.

ಅಪಾರ್ಟ್‌ಮೆಂಟ್‌ ಸಮುಚ್ಚಯದ ಆವರಣದಲ್ಲಿ ಬಲೂನ್‌ಗಳಿಗೆ ಗಾಳಿ ತುಂಬಿಸುತ್ತಿದ್ದಾಗ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿತು. ದಿನೇಶ್‌ ಅವರ ದೇಹ ಛಿದ್ರವಾಯಿತು. ಸ್ಥಳಕ್ಕೆ ಅಶೋಕನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು