ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಲಿಂಡರ್ ರಿಫಿಲ್ಲಿಂಗ್‌ ವೇಳೆ ಬೆಂಕಿ ಅವಘಡ

Last Updated 8 ಜನವರಿ 2022, 20:50 IST
ಅಕ್ಷರ ಗಾತ್ರ

ಬೆಂಗಳೂರು: ಸಿಲಿಂಡರ್‌ ರಿಫಿಲ್ಲಿಂಗ್‌ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಇಬ್ಬರು ಗಾಯಗೊಂಡಿದ್ದಾರೆ. ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮೂಡಲಪಾಳ್ಯದ ಅನ್ನಪೂರ್ಣೇಶ್ವರಿ ನಗರದಲ್ಲಿ ವಾಸವಿದ್ದ ಬೆಟ್ಟಯ್ಯ ಎಂಬುವರು ಭಾರತ್‌ ಭವಾನಿ ಗ್ಯಾಸ್‌ ಹೆಸರಿನ ಏಜೆನ್ಸಿ ನಡೆಸುತ್ತಿದ್ದರು. ಮೂಡಲಪಾಳ್ಯ ವೃತ್ತದ ಬಳಿಯ ತಮ್ಮ ಮನೆಯ ಎದುರು ಸಣ್ಣ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಅಡುಗೆ ಅನಿಲ ಮರುಪೂರಣ (ಫಿಲ್ಲಿಂಗ್‌) ಮಾಡುತ್ತಿದ್ದರು. ಈ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರಿಂದ ಅವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಹೀಗಾಗಿ ದೊಡ್ಡ ಅನಾಹುತವೊಂದು ತಪ್ಪಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್‌ ಪಾಟೀಲ ತಿಳಿಸಿದರು.

‘ಮನೆಯ ಎದುರೇ ಸಿಲಿಂಡರ್‌ಗಳನ್ನು ಸಾಲಾಗಿ ಜೋಡಿಸಿಡಲಾಗಿತ್ತು. ರಿಫಿಲ್ಲಿಂಗ್‌ ವೇಳೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರಲಿಲ್ಲ. ಜೊತೆಗೆ ಸಣ್ಣ ಸಿಲಿಂಡರ್‌ಗಳಿಗೆ ಅಕ್ರಮವಾಗಿ ರಿಫಿಲ್ಲಿಂಗ್‌ ಮಾಡುತ್ತಿದ್ದರು. ಹೀಗಾಗಿ ಏಜೆನ್ಸಿಯ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT