ಡಿ.ಸಿ.ಗೌರಿಶಂಕರ್‌ಗೆ ನೋಟಿಸ್‌ ಜಾರಿ

7
ಹೈಕೋರ್ಟ್‌ ಮೆಟ್ಟಿಲೇರಿದ ಪರಾಜಿತ ಅಭ್ಯರ್ಥಿ ಬಿ.ಸುರೇಶ್‌ ಗೌಡ

ಡಿ.ಸಿ.ಗೌರಿಶಂಕರ್‌ಗೆ ನೋಟಿಸ್‌ ಜಾರಿ

Published:
Updated:

ಬೆಂಗಳೂರು: ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ ಸ್ವಾಮಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಚುನಾವಣೆಯಲ್ಲಿ ಸೋಲುಂಡಿರುವ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಎಲ್ಲ 11 ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್‌ 7ಕ್ಕೆ ಮುಂದೂಡಲಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ನಳಿನಾ ಮಾಯೇಗೌಡ, ‘2018ರ ಸಾರ್ವತ್ರಿಕ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌರಿಶಂಕರ್ ವ್ಯಾಪಕ ಚುನಾವಣಾ ಅಕ್ರಮ ಎಸಗಿ ಆಯ್ಕೆಯಾಗಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಕಲಂ 123 ಅನ್ನು ಉಲ್ಲಂಘಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

‘ಜೆಡಿಎಸ್ ಅಭ್ಯರ್ಥಿಯಾಗಿದ್ದ ಗೌರಿಶಂಕರ್ ನಾಮಪತ್ರ ಸಲ್ಲಿಕೆ ನಂತರ ಮತದಾರರಿಗೆ ಮತಯಾಚನೆ ಪತ್ರದ ಜೊತೆ ಆರೋಗ್ಯ ವಿಮೆ ಪಾಲಿಸಿ ನೀಡಿ ಆಮಿಷವೊಡ್ಡಿ ಅವರಿಂದ ಮತಗಳನ್ನು ಪಡೆದು ಆರಿಸಿ ಬಂದಿದ್ದಾರೆ. ಹಾಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಕೋರಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !