ಬುಧವಾರ, ಫೆಬ್ರವರಿ 19, 2020
30 °C

ಡಿಕೆಶಿ ಬಂಧನ: ರಾಮನಗರದಲ್ಲಿ ಬಂದ್, ಪ್ರತಿಭಟನೆಗಳ ನಷ್ಟ ಲೆಕ್ಕಾಚಾರಕ್ಕೆ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: "ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ವೇಳೆ ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್ ಮತ್ತು ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಉಂಟಾದ ನಷ್ಟದ ಪ್ರಮಾಣ ನಿರ್ಧರಿಸಲು ಎಕ್ಸಿಕ್ಯುಟಿವ್ ಎಂಜಿನಿಯರ್ ನೇಮಕ ಮಾಡಲಾಗಿದೆ" ಎಂದು ಸರ್ಕಾರ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮಾಹಿತಿ ನೀಡಿದೆ. 

ಈ ಸಂಬಂಧ ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನೀಡಿದ ಈ ಮಾಹಿತಿಗೆ ನ್ಯಾಯಪೀಠ, "ಎಕ್ಸಿಕ್ಯುಟಿವ್ ಎಂಜಿನಿಯರ್ ಅವರ ನೇಮಕವನ್ನು ಒಪ್ಪಲು ಸಾಧ್ಯವಿಲ್ಲ. ಹಾಗೆಯೇ ಅವರನ್ನು ತಜ್ಞರು ಎಂದೂ ಪರಿಗಣಿಸಲು ಆಗುವುದಿಲ್ಲ" ಎಂದು ತಿಳಿಸಿದೆ.

"ಉನ್ನತ ಮಟ್ಟದ ಜ್ಞಾನ ಹೊಂದಿರುವ ತಜ್ಞರನ್ನು ನೇಮಕ ಮಾಡಿ ಆ ಕುರಿತು ವರದಿ ನೀಡಿ" ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು