ಶುಕ್ರವಾರ, ಅಕ್ಟೋಬರ್ 30, 2020
19 °C

ಸಿ.ಎಂಗೆ ಡಿಕೆಶಿ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಯುಸಿ ಉಪನ್ಯಾಸಕ ಹುದ್ದೆಗೆ ಆಯ್ಕೆಯಾದವರಿಗೆ ತಕ್ಷಣ ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪತ್ರ ಬರೆದಿದ್ದಾರೆ.

‘ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ಪದವಿಪೂರ್ವ ಶಿಕ್ಷಣ ಮಂಡಳಿಯ ಎದುರು ಆಯ್ಕೆಯಾದವರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹುದ್ದೆ ಭರ್ತಿಗೆ 2014ರ ಮೇ 15ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಆಯ್ಕೆಯಾದವರಿಗೆ ಆರು ವರ್ಷ ಕಳೆದರೂ ನೇಮಕಾತಿ ಆದೇಶ ನೀಡಿಲ್ಲ. ಆಯ್ಕೆಯಾದವರಿಗೆ ಇದರಿಂದ ದೊಡ್ಡ ಪ್ರಮಾಣದ ನಷ್ಟ, ಅನ್ಯಾಯ ಆಗಿದೆ’ ಎಂದೂ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.