ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರೋಗ್ಯದ ಕಡೆ ಗಮನ ಹರಿಸಿ: ಡಿ.ಕೆ.ಸುರೇಶ್

ಆರೋಗ್ಯ ಉಚಿತ ತಪಾಸಣಾ ಶಿಬಿರ
Published 4 ಆಗಸ್ಟ್ 2024, 15:43 IST
Last Updated 4 ಆಗಸ್ಟ್ 2024, 15:43 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ಲಗ್ಗೆರೆಯ ಅರ್ಪಿತಾ ಸೇವಾ ಟ್ರಸ್ಟ್‌ ಹಾಗೂ ವಿವಿಧ ಆಸ್ಪತ್ರೆಗಳ ಸಹಯೋಗದೊಂದಿಗೆ ಚೌಡೇಶ್ವರಿ ನಗರದ ಅಪಲೊ ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌ನಲ್ಲಿ ಭಾನುವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ನೂರಾರು ಮಂದಿ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡರು.

ಮಾಜಿ ಸಂಸದ ಡಿ.ಕೆ.ಸುರೇಶ್ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ‘ಕಲುಷಿತ ಆಹಾರ, ನೀರು, ಗಾಳಿ ಹಾಗೂ ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ರೋಗಗಳು ಹೆಚ್ಚಾಗುತ್ತಿವೆ. ಎಲ್ಲರೂ ಆರೋಗ್ಯದ ಕಡೆ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆಪಿಸಿಸಿ ವಕ್ತಾರೆ ಎಚ್‌.ಕುಸುಮಾ, ‘ಆರೋಗ್ಯಕ್ಕಿಂತ ಬಹುದೊಡ್ಡ ಸಂಪತ್ತು ಬೇರೊಂದಿಲ್ಲ. ಮಕ್ಕಳು ಜಂಕ್‌ಫುಡ್‌ ತಿನ್ನುವುದನ್ನು ನಿಲ್ಲಿಸಿ. ಕ್ರೀಡೆಗಳತ್ತ ಗಮನಹರಿಸಿ’ ಎಂದರು.

ಕಾರ್ಯಕ್ರಮ ಆಯೋಜಿಸಿದ್ದ ಅರ್ಪಿತ ಸೇವಾ ಟ್ರಸ್ಟ್ ಅಧ್ಯಕ್ಷ ಲಗ್ಗೆರೆ ನಾರಾಯಣಸ್ವಾಮಿ ಮಾತನಾಡಿದರು. ಸಪ್ತಗಿರಿ, ಕಿಮ್ಸ್‌, ಪೂರ್ಣಸುಧಾ ಕ್ಯಾನ್ಸರ್ ಆಸ್ಪತ್ರೆಗಳ ಸಹಯೋಗದಲ್ಲಿ ಮೇಳ ನಡೆಯಿತು. 

ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ, ಬಿಬಿಎಂಪಿ ಮಾಜಿ ಸದಸ್ಯರಾದ ವೇಲುನಾಯ್ಕರ್, ಜಿ.ಮೋಹನ್ ಕುಮಾರ್, ಮಂಜುಳಾ ನಾರಾಯಣಸ್ವಾಮಿ, ಸಿದ್ದೇಗೌಡ, ಸಪ್ತಗಿರಿ ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಮೇಶ್‍ರಾಜು, ಆರ್.ಆರ್.ನಗರ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ರಾಂಪುರ ನಾಗೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT