ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಮಾಪತಿಗೆ ರಾಚಯ್ಯ ಪ್ರಶಸ್ತಿ

Published : 30 ಜೂನ್ 2019, 20:10 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಪತ್ರಿಕಾ ಸಂಪಾದಕರ ಸಂಘ ನೀಡುವ ರಾಜ್ಯ ಮಟ್ಟದ ಬಿ. ರಾಚಯ್ಯ ಸ್ಮಾರಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಿ. ಉಮಾಪತಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಫಲಕಗಳನ್ನು ಒಳಗೊಂಡಿದೆ.ಪತ್ರಿಕಾ ಸಂಪಾದಕರಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಶಂಕರಪ್ಪ ಹುಸನಪ್ಪ ಛಲವಾದಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ₹5 ಸಾವಿರ ನಗದು ಮತ್ತು ಫಲಕಗಳನ್ನು ಒಳಗೊಂಡಿದೆ.

ಚಿತ್ರದುರ್ಗದ ಮುರುಘಾ ಮಠದ ಅಲ್ಲಮಪ್ರಭು ಸಭಾಂಗಣದಲ್ಲಿ ಜುಲೈ 7ರಂದು ನಡೆಯುವ ಪತ್ರಿಕಾ ದಿನಾಚರಣೆ ಮತ್ತು ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT