ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜೃಂಭಣೆಯ ಬೈಲಾಂಜನೇಯ ರಥೋತ್ಸವ

Last Updated 19 ಮೇ 2019, 16:17 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಪಟ್ಟಣದ ಬೈಲಾಂಜನೇಯ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.

ರಥೋತ್ಸವದ ಪ್ರಯುಕ್ತ ದೇಗುಲಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ವಿಶೇಷ ಪೂಜೆಯ ಬಳಿಕ ಆಂಜನೇಯ, ಸೀತಾ, ಲಕ್ಷ್ಮಣರನ್ನು ಒಳಗೊಂಡ ರಾಮ ದೇವರ ಉತ್ಸವ ಮೂರ್ತಿಯನ್ನು ಮಂಗಳ ವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ತಂದು ಅಲಂಕೃತಗೊಂಡ ರಥದಲ್ಲಿ ಕೂರಿಸಲಾಯಿತು. ನೆರೆದಿದ್ದ ಭಕ್ತರು ರಥ ಎಳೆದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರಥ ತೆರಳಿದಂತೆ ಭಕ್ತರು ಧವನ ಬಾಳೆಹಣ್ಣು ಎಸೆದರು. 20ಕ್ಕೂ ಹೆಚ್ಚು ಅರವಟಿಕೆಗಳಲ್ಲಿ ನೀರು ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆಯೊಂದಿಗೆ ಅನ್ನಸಂತರ್ಪಣೆಯೂ ನಡೆಯಿತು.

ಜಾನಪದ ಕಲಾ ಪ್ರಕಾರಗಳಾದ ವೀರಗಾಸೆ, ಪಟ್ಟದ ಕುಣಿತ, ಚಿಟ್ಟಿಮೇಳ, ತಮಟೆ ವಾದ್ಯ, ಕೋಲಾಟ ಮತ್ತು ನಂದಿಧ್ವಜ ಕುಣಿತ ಸಂಭ್ರಮ ಹೆಚ್ಚಿಸಿದವು.

ರಥೋತ್ಸವದ ಹಿಂದಿನ ದಿನ ಕುಂಬಾರ, ದೇವಾಂಗ, ಜ್ಯೋತಿಪಣ, ಅಗ್ನಿವಂಶ ಕ್ಷತ್ರಿಯ ಸಮುದಾಯದವರಿಂದ ವಿಶೇಷ ಆಚರಣೆಗಳು ನಡೆದವು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT