ಮಂಗಳವಾರ, ಫೆಬ್ರವರಿ 25, 2020
19 °C

ದಾಬಸ್‌ಪೇಟೆ: ಸಂಭ್ರಮದ ಬ್ರಹ್ಮ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾಬಸ್‌ಪೇಟೆ: ನರಸೀಪುರ ತೋಪಿನಲ್ಲಿರುವ ಆತ್ಮಾರಾಮ ಸ್ವಾಮಿ ಬ್ರಹ್ಮರಥೋತ್ಸವ ಭರತ ಹುಣ್ಣಿಮೆಯಾದ ಭಾನುವಾರ ಸಂಭ್ರಮದಿಂದ ನಡೆಯಿತು.

ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಸಂಪ್ರದಾಯದಂತೆ ಹಾಲೇನಹಳ್ಳಿ ಗ್ರಾಮಸ್ಥರು ರಥಕ್ಕೆ ಹಾಗೂ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ರಥದ ಮೇಲೆ ದೇವರ ಮೂರ್ತಿ ಕೂರಿಸಿ, ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಯಿತು.

ಭಕ್ತರು ಹರ್ಷೋದ್ಗಾರ ವ್ಯಕ್ತಪಡಿಸಿದರು. ರಥ ಎಳೆಯುತ್ತಿದ್ದಂತೆ ಸೂರು ಬಾಳೆಹಣ್ಣನ್ನು ಎಸೆದು ಸಂಭ್ರಮ ಪಟ್ಟರು. ನಂದಿಧ್ವಜ, ವೀರಗಾಸೆ, ತಮಟೆ ಕಲಾವಿದರು ಮಂಗಳವಾಧ್ಯಗಳೊಂದಿಗೆ ಪ್ರಾಕಾರೋತ್ಸವ ನಡೆಸಿದರು. ಹತ್ತಕ್ಕೂ ಹೆಚ್ಚು ಜೊತೆ ಎತ್ತುಗಳನ್ನು ಮೆರವಣಿಗೆ ಮಾಡಲಾಯಿತು. ಸಂಜೆ ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)