ಸೋಮವಾರ, ಫೆಬ್ರವರಿ 24, 2020
19 °C

ದಸಂಸ ತಮಟೆ ಚಳವಳಿ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಲಿತರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಶೇ 30ರಷ್ಟು ಅನುದಾನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು  ಇದೇ 10ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ತಮಟೆ ಚಳವಳಿ ಹಮ್ಮಿಕೊಂಡಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎನ್‌.ಮೂರ್ತಿ, ‘ಕೇಂದ್ರ, ರಾಜ್ಯ ಸರ್ಕಾರಗಳು ದಲಿತರಿಗೆ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗಿವೆ’ ಎಂದು ಟೀಕಿಸಿದರು.

‘ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿಯನ್ನು ಶೇ 30ಕ್ಕೆ ಹೆಚ್ಚಿಸಬೇಕು. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು. ಸುಳ್ಳು ಪ್ರಮಾಣಪತ್ರಗಳ ಮೂಲಕ ದಲಿತರ ಸೌಲಭ್ಯಗಳನ್ನು ಪಡೆಯುತ್ತಿರುವವರ ಮೇಲೆ ಕ್ರಮ ಸೇರಿದಂತೆ 20 ಬೇಡಿಕೆ
ಗಳನ್ನು ಈಡೇರಿಸಬೇಕು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು