ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್‌ ತಲೆ ಎತ್ತದಂತೆ ಮಾಡಿ: ಬಂಡಾರು ದತ್ತಾತ್ರೇಯ ಹೇಳಿಕೆ

Last Updated 17 ಮಾರ್ಚ್ 2018, 9:50 IST
ಅಕ್ಷರ ಗಾತ್ರ

ಕುಷ್ಟಗಿ: ಸ್ವಚ್ಛ ಆಡಳಿತ ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರವನ್ನೇ ಉಸಿರಾಗಿಸಿಕೊಂಡಿದ್ದು, ಭವಿಷ್ಯದಲ್ಲಿ ಮುಂದೆ ಈ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ತಲೆ ಎತ್ತದಂತೆ ನೋಡಿಕೊಳ್ಳಬೇಕಿದೆ ಎಂದು ಕೇಂದ್ರದ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಹೇಳಿದರು.

ಇಲ್ಲಿ ಶುಕ್ರವಾರ ನಡೆದ ಬಿಜೆಪಿ ಮಂಡಲ, ಮತಗಟ್ಟೆ ಅಧ್ಯಕ್ಷರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಬೇರೆಯವರ ಭ್ರಷ್ಟಾಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಾರೆ. ಆದರೆ, ಅವರ ಮೇಲೆಯೇ ಸಾಕಷ್ಟು ಆರೋಪಗಳಿವೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಬೇಕು ಎಂದರು.

ದೇಶದಲ್ಲಿ ಹೆಚ್ಚು ಸಮಯ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷ ಮಾಡಿದ್ದು ಕೇವಲ ಭ್ರಷ್ಟಾಚಾರ. ಆ ಹೊಲಸನ್ನು ತೊಳೆಯುವ ಸಲುವಾಗಿಯೇ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಬೇಕಾಯಿತು. ಕೆಲವೇ ಕಡೆಗಳಲ್ಲಿ ಇದ್ದ ಬಿಜೆಪಿ ಈಗ 22 ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ಇದು ಬಿಜೆಪಿಯ ಸಾಧನೆ ಎಂದು ಹೇಳಿದರು.

ಕೇಂದ್ರ ಸರ್ಕಾರ ರೈತರು, ಕೂಲಿಕಾರರು, ಕಾರ್ಮಿಕರು ಸೇರಿ ಜನಸಾಮಾನ್ಯರ ಕಲ್ಯಾಣಕ್ಕೆ ಹಲವು ಕಾರ್ಯಕ್ರಮಗಳನ್ನು ನೀಡಿದೆ. ಆದರೆ, ರೈತರ ಸಂಕಷ್ಟದ ಸ್ಥಿತಿಯಲ್ಲಿ ನೆರವಾಗುವ ಪ್ರಧಾನಮಂತ್ರಿ ಫಸಲ್‌ ವಿಮಾ ಯೋಜನೆಯ ಫಲವನ್ನು ಜನರಿಗೆ ತಲುಪಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ ಬಂಡಾರು ದತ್ತಾತ್ತೇಯ, ಬೂತ್‌ ಮಟ್ಟದಲ್ಲಿ ಪದಾಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಬೇಕು. ಆ ಮೂಲಕ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನಯ ಗೆಲ್ಲಿಸಬೇಕು ಎಂದು ಹೇಳಿದರು.

ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆದಿರುವುದರಿಂದ ಕಾಂಗ್ರೆಸ್‌ನವರಿಗೆ ಬಿಜೆಪಿ ಬಗ್ಗೆ ದೂರುವುದಕ್ಕೆ ಯಾವುದೇ ವಿಷಯಗಳು ಇಲ್ಲ ಎಂದರು.

ಹಣ ಬಲದಿಂದ ಏನನ್ನೂ ಮಾಡಲು ಸಾಧ್ಯವಿಲ್ಲ ಎಂಬುದನ್ನು ಈ ಕ್ಷೇತ್ರದ ಜನ ಕಳೆದ ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ ಎಂದ ಶಾಸಕ, ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಚಟುವಟಿಕೆಗಳನ್ನೇ ಕಾಂಗ್ರೆಸ್‌ ನಕಲು ಮಾಡುತ್ತಿದೆ ಎಂದು ಗೇಲಿಮಾಡಿದರು.

ಮಾಜಿ ಸಂಸದರಾದ ಕೆ.ವಿರುಪಾಕ್ಷಪ್ಪ, ಎಸ್‌.ಶಿವರಾಮಗೌಡ, ಮಾಜಿ ಶಾಸಕ ಕೆ.ಶರಣಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ, ಮುಖಂಡ ನರಸಿಂಗರಾವ ಕುಲಕರ್ಣಿ ಮಾತನಾಡಿದರು.

ತಾಲ್ಲೂಕು ಘಟಕದ ಅಧ್ಯಕ್ಷ ತಮ್ಮಣ್ಣಾಚಾರ ದಿಗ್ಗಾವಿ, ಅಪ್ಪಣ್ಣ ಪದಕಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶರಣು ತಳ್ಳಿಕೇರಿ, ಶಶಿಧರ ಕವಲಿ ಇದ್ದರು. ಈರಣ್ಣ ಸಬರದ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT