ಬೆಂಗಳೂರು: ‘ಸಿದ್ದರಾಮಯ್ಯ ತೆರವು ಮಾಡುತ್ತಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಶಿಷ್ಟ ಸಮುದಾಯದ ನಾಯಕರೊಬ್ಬರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಬೇಕು’ ಎಂದು ಕರ್ನಾಟಕ ನವ ಜಾಗೃತಿ ವೇದಿಕೆ ಆಗ್ರಹಿಸಿದೆ.

‘ದಲಿತ ಸಮುದಾಯ ಬೆನ್ನಿಗೆ ನಿಂತ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ. ಆದರೆ, ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿಯ ಆಯ್ಕೆ ವಿಚಾರ ಬಂದಾಗ ದಲಿತರನ್ನು ನಿರ್ಲಕ್ಷಿಸುತ್ತಲೇ ಬರಲಾಗಿದೆ’ ಎಂದು ವೇದಿಕೆಯ ಅಧ್ಯಕ್ಷ ಅನಂತರಾಯಪ್ಪ ಆರೋಪಿಸಿದ್ದಾರೆ.

‘ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲ ಅರ್ಹತೆಗಳಿದ್ದ ಬಿ. ಬಸವಲಿಂಗಪ್ಪ, ಕೆ.ಎಚ್. ರಂಗನಾಥ್, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ ಮೊದಲಾದ ನಾಯಕರಿದ್ದರೂ ಕಾಂಗ್ರೆಸ್ ಅವಕಾಶ ನೀಡಿಲ್ಲ. ಲಿಂಗಾಯತ, ಒಕ್ಕಲಿಗ, ಹಿಂದುಳಿದ ವರ್ಗಕ್ಕೆ ಸೇರಿದ ನಾಯಕರುಗಳಿಗೆ ಅನೇಕ ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ನೀಡಿದೆ. ಆದರೆ, ನಿರಂತರವಾಗಿ ಮತ ಕೊಟ್ಟು ಮತ್ತೆ ಮತ್ತೆ ಅಧಿಕಾರಕ್ಕೆ ಬರಲು ಕಾರಣರಾದ ಪರಿಶಿಷ್ಟರಿಗೆ ಒಮ್ಮೆಯೂ ಅವಕಾಶ ನೀಡಿಲ್ಲ. ಇದು ಕಾಂಗ್ರೆಸ್ ಪಕ್ಷದ ಬೂಟಾಟಿಕೆಯ ದಲಿತ ಪ್ರೇಮಕ್ಕೆ ಸಾಕ್ಷಿ’ ಎಂದು ಅವರು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.