ಬೆಂಗಳೂರು: ಯುವತಿಯರಿಂದ ಅರೆನಗ್ನ ನೃತ್ಯ ಮಾಡಿಸುತ್ತಿದ್ದ ಆರೋಪದಡಿ ಎರಡು ಬಾರ್ಗಳ ಮೇಲೆ ಉಪ್ಪಾರಪೇಟೆ ಪೊಲೀಸರು ದಾಳಿ ಮಾಡಿದ್ದು, ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಗಾಂಧಿನಗರದ ಎಸ್.ಸಿ. ರಸ್ತೆಯಲ್ಲಿರುವ ರಾಜಧಾನಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ವೈ. ರಾಮಚಂದ್ರ ರಸ್ತೆಯಲ್ಲಿರುವ ಸೆವೆನ್ ಹಿಲ್ಸ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಮೇಲೆ ದಾಳಿ ಮಾಡಲಾಗಿದೆ. ಪರವಾನಗಿ ನಿಯಮ ಉಲ್ಲಂಘಿಸಿದ ಆರೋಪದಡಿ ಮಾಲೀಕರು ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬಾರ್ನಲ್ಲಿ ಕೆಲಸಕ್ಕೆ ಯುವತಿಯರನ್ನು ನೇಮಿಸಿಕೊಂಡಿದ್ದ ಆರೋಪಿಗಳು, ಅವರಿಂದ ಅರೆನಗ್ನ ನೃತ್ಯ ಮಾಡಿಸುತ್ತಿದ್ದರು. ಗ್ರಾಹಕರನ್ನು ಸೆಳೆದು, ಪ್ರಚೋದಿಸುವ ಉದ್ದೇಶ ಮಾಲೀಕರದ್ದಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ, ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಯುವತಿಯರನ್ನು ವಿಚಾರಣೆ ಮಾಡಿ, ಹೇಳಿಕೆ ದಾಖಲಿಸಿಕೊಳ್ಳಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.