ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವಿದ್ಯಾರ್ಥಿಗಳ ಶಿಕ್ಷಣಕ್ಕೆ ₹50 ಲಕ್ಷ

Last Updated 11 ಏಪ್ರಿಲ್ 2021, 15:32 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸ್‌ಗಳು ಮಾತ್ರವಲ್ಲದೆ, ಬಿ.ಇಡಿ, ಕಾನೂನು ಸೇರಿದಂತೆ ವಿವಿಧ ಕೋರ್ಸ್‌ಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಡ್ಯಾನಿಷ್‌ ಎಜುಕೇಷನಲ್‌ ಟ್ರಸ್ಟ್‌ ₹50.25 ಲಕ್ಷ ವಿದ್ಯಾರ್ಥಿ ವೇತನ ವಿತರಿಸಿತು.

ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಓದುತ್ತಿರುವ 195 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಟ್ರಸ್ಟ್‌ ಸಂಸ್ಥಾಪಕಿ ಹುಸ್ನಾ ಝೀಯಾವುಲ್ಲಾ ಶರೀಫ್ ಭಾನುವಾರ ವಿತರಿಸಿದರು.

‘ಪ್ರಸ್ತುತ ಸಾಲಿನಲ್ಲಿ ಎಂಬಿಬಿಎಸ್ ಓದುತ್ತಿರುವ 45 ವಿದ್ಯಾರ್ಥಿಗಳಿಗೆ ತಲಾ ₹31 ಸಾವಿರ, ಎಂಜಿನಿಯರಿಂಗ್‌ನ 62 ವಿದ್ಯಾರ್ಥಿಗಳಿಗೆ ತಲಾ ₹ 25 ಸಾವಿರ, ಪದವಿ ವ್ಯಾಸಂಗದ 11 ವಿದ್ಯಾರ್ಥಿಗಳಿಗೆ ತಲಾ ₹30 ಸಾವಿರ, ಬಿ.ಇಡಿ ಓದುತ್ತಿರುವ 43 ವಿದ್ಯಾರ್ಥಿಗಳಿಗೆ ₹15 ಸಾವಿರ, ವಿದೇಶದಲ್ಲಿ ಕಾನೂನು ವ್ಯಾಸಂಗ ಮಾಡುತ್ತಿರುವ ಒಬ್ಬ ವಿದ್ಯಾರ್ಥಿಗೆ ₹1 ಲಕ್ಷ ನೀಡಲಾಯಿತು’ ಎಂದು ಹುಸ್ನಾ ಹೇಳಿದರು.

‘ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಮತ್ತಷ್ಟು ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ನೀಡಲು ಉದ್ದೇಶಿಸಲಾಗಿದೆ. ಜತೆಗೆ ಈ ಬಾರಿ ಕೋವಿಡ್ ಕಾರಣದಿಂದಾಗಿ ಚೆಕ್‌ಗಳನ್ನು ವಿತರಣೆ ಮಾಡದೆ, ಎಲ್ಲ ವಿದ್ಯಾರ್ಥಿಗಳ ಬ್ಯಾಂಕಿನ ಖಾತೆಗೆ ಹಣ ಜಮೆ ಮಾಡಲಾಗಿದೆ’ ಎಂದರು.

ಉರ್ದು ಕವಿ ಝೀಯಾವುಲ್ಲಾ ಶರೀಫ್, ‘ದೇಶದ ಭವಿಷ್ಯ ಶಿಕ್ಷಣದ ಮೇಲೆ ನಿಂತಿದೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪಾಲಕರ ಆದ್ಯ ಕರ್ತವ್ಯ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ರೂಪಿಸಬೇಕು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT