ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ಇಲ್ಲಿನ 57ನೇ ಎಸಿಎಂಎಂ ನ್ಯಾಯಾಲಯಕ್ಕೆ ಗುರುವಾರ ವಿಚಾರಣೆಗೆ ಹಾಜರಾಗಿದ್ದರು. ಪವಿತ್ರಾಗೌಡ ಗೈರಾಗಿದ್ದರು.

ಪ್ರಕರಣದ ಆರೋಪಿಗಳ ಹಾಜರಾತಿ ಪಡೆದ ನ್ಯಾಯಾಧೀಶರು, ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದರು. ಎಲ್ಲ ಆರೋಪಿಗಳೂ ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದರು.

2024ರ ಜೂನ್ 8ರಂದು ಪಟ್ಟಣಗೆರೆಯ ಶೆಡ್ನಲ್ಲಿ ರೇಣುಕಸ್ವಾಮಿ ಅವರ ಕೊಲೆ ನಡೆದಿತ್ತು. ಕೊಲೆಯ ಆರೋಪದ ಮೇರೆಗೆ ದರ್ಶನ್, ಪವಿತ್ರಾಗೌಡ ಸೇರಿ 16 ಮಂದಿ ಆರೋಪಿಗಳನ್ನು ಜೂನ್ 11ರಂದು ಪೊಲೀಸರು ಬಂಧಿಸಿದ್ದರು. ಎಲ್ಲ ಆರೋಪಿಗಳಿಗೂ ಜಾಮೀನು ಸಿಕ್ಕಿದ್ದು ನ್ಯಾಯಾಲಯ ನಿಗದಿ ಪಡಿಸಿದ ದಿನದಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.