ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ಖಂಡಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಶ್ರೀಧರ ಕಲಿವೀರ, ಅನುಮತಿ ನೀಡಿರುವುದು ಸಂವಿಧಾನಬಾಹಿರ, ‘ಮುಡಾ’ ನಿವೇಶನ ವಿಚಾರದಲ್ಲಿ ಸಿದ್ದರಾಮಯ್ಯ ಯಾವುದೇ ಅಕ್ರಮ ಎಸಗಿಲ್ಲ. ಭ್ರಷ್ಟಾಚಾರ ನಡೆದಿಲ್ಲ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. ಷಡ್ಯಂತ್ರದ ವಿರುದ್ಧ ಕಾನೂನು ಹೋರಾಟ ಕೈಗೊಳ್ಳಬೇಕು. ಅವರ ಪರ ಸಂಘಟನೆ ನಿಲ್ಲುತ್ತದೆ. ಶೋಷಿತರು, ದಲಿತರ ನೇತೃತ್ವದಲ್ಲಿ ಹೋರಾಟ ರೂಪಿಸುತ್ತದೆ ಎಂದು ಹೇಳಿದ್ದಾರೆ.