ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಅಸಾಂವಿಧಾನಿಕ ಪದ ಬಳಕೆ ಮಾಡಿರುವುದನ್ನು ಖಂಡಿಸಿ ರಾಜ್ಯದಾದ್ಯಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಎಚ್ಚರಿಕೆ ನೀಡಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ಭಜನಾ ಮಂಡಳಿಯ ಸದಸ್ಯರಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಇತರ ದಲಿತ ನಾಯಕರನ್ನು ವಿನಾಕಾರಣ ನಿಂದಿಸುವ ಕೀಳುಮಟ್ಟದ ರಾಜಕಾರಣವನ್ನು ಬಿಟ್ಟು, ಮುತ್ಸದ್ದಿತನವನ್ನು ಮೈಗೂಡಿಸಿಕೊಳ್ಳಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರು ತೋರಿದ ಮಾರ್ಗದಲ್ಲಿ ಮುನ್ನಡೆಯಬೇಕು’ ಎಂದು ಹೇಳಿದರು.

‘ಛಲವಾದಿ ನಾರಾಯಣಸ್ವಾಮಿ ಅವರು ಜಾತಿವಾದವನ್ನು ಬೆಂಬಲಿಸುವವರ ಹಾಗೂ ಸಂವಿಧಾನ ವಿರೋಧಿಗಳ ಜೊತೆಯಲ್ಲಿ ನಿಂತಿದ್ದಾರೆ. ಮನುವಾದವೇ ಅವರ ಮೂಲ ಮಂತ್ರ, ವರ್ಣಾಶ್ರಮ ಧರ್ಮದ ಅಸಮಾನ ನೆಲೆಗಳೇ ಅವರ ಅಸ್ತ್ರಗಳಾಗಿವೆ. ಅಂತಹವರೊಂದಿಗೆ ಸೇರಿ ನೀವು ದಲಿತರಿಗೆ ನ್ಯಾಯ ಕೊಡಿಸುವುದಕ್ಕೆ ಆಗುತ್ತದೆ? ಅವರು ಹೇಳಿದ ಚಾಕರಿ ಮಾಡಲು ನಿಮ್ಮಂತವರು ಮನುವಾದಿಗಳಿಗೆ ಬೇಕು. ನಿಮ್ಮ ಕೈಯಿಂದಲೇ ದಲಿತರನ್ನು ಹೇಗೆ ಅವಮಾನಿಸಬೇಕು ಎಂದು ಅವರಿಗೆ ಚೆನ್ನಾಗಿ ಗೊತ್ತು. ಅದಕ್ಕಾಗಿಯೇ ಅವರು ನಿಮ್ಮಂತಹವರನ್ನು ಇಟ್ಟುಕೊಂಡಿದ್ದಾರೆ’ ಎಂದು ದೂರಿದರು.

‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜಾತಿ ನಿರ್ದೇಶನಾಲಯವನ್ನು (ಇ.ಡಿ) ತನ್ನ ಗುರಾಣಿಯ ನ್ನಾಗಿ ಬಳಸಿಕೊಳ್ಳುತ್ತಿದೆ. ಇ.ಡಿ ಕೇಂದ್ರ ಸರ್ಕಾರದ ಬಾಲಂಗೋಚಿಯಂತೆ ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ ಗೃಹ ಸಚಿವ ಜಿ. ಪರಮೇಶ್ವರ ಮೇಲೆ ಇ.ಡಿ. ದಾಳಿ ನಡೆಸಿರುವುದು ಖಂಡನೀಯ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.