ಭಾನುವಾರ, ಜುಲೈ 25, 2021
22 °C

ಶೇ 50ರಷ್ಟು ಹಾಸಿಗೆ ಕಾಯ್ದಿರಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: 'ದಾಸರಹಳ್ಳಿ ವಲಯದ ಖಾಸಗಿ ಆಸ್ಪತ್ರೆಗಳಲ್ಲಿ ಶೇ 50ರಷ್ಟು ಹಾಸಿಗೆಗಳನ್ನು ಕ್ಷೇತ್ರದ ಕೋವಿಡ್‌ ರೋಗಿಗಳಿಗೆ ಕಾಯ್ದಿರಿಸಬೇಕು' ಎಂದು ಶಾಸಕ ಆರ್.ಮಂಜುನಾಥ್ ಸೂಚಿಸಿದರು.

ಕೊರೊನಾ ನಿಯಂತ್ರಣಕ್ಕಾಗಿ ದಾಸರಹಳ್ಳಿ ವಲಯದ ಪಾಲಿಕೆ ಕಚೇರಿಯಲ್ಲಿ ಸೋಮವಾರ ನಡೆದ ಖಾಸಗಿ ಆಸ್ಪತ್ರೆಗಳ ಮಾಲೀಕರು, ಆಡಳಿತಾಧಿಕಾರಿಗಳು ಹಾಗೂ ಉನ್ನತ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

'ಈ ಭಾಗದಲ್ಲಿ ಕೊರೊನಾ ಸಂಬಂಧದ ದೂರುಗಳಿಗೆ ಸ್ಪಂದಿಸಲು 080-29590057, 080-29635906, 080-29635904 ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಕ್ಷೇತ್ರದಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಹಾಯವಾಣಿಗೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು' ಎಂದು ಜಂಟಿ ಆಯುಕ್ತರು ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು