ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Last Updated 9 ಮಾರ್ಚ್ 2023, 20:06 IST
ಅಕ್ಷರ ಗಾತ್ರ

ಬೆಂಗಳೂರು: ಡೇ ಕೇರ್‌ನಲ್ಲಿದ್ದ (ಶಿಶುಪಾಲನಾ ಕೇಂದ್ರ) 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿ ಅಶ್ವಥ್ ನಾರಾಯಣ್‌ ರಾವ್ (57) ಎಂಬಾತನಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.

ನಗರದ ಯಲಹಂಕ ನ್ಯೂ ಟೌನ್‌ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ಕೆ.ಎನ್. ರೂಪಾ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದಿಸಿದ್ದರು.

ಯಲಹಂಕ ಚಿಕ್ಕ ಬೊಮ್ಮಸಂದ್ರದ ನಿವಾಸಿ ಅಶ್ವಥ್ ನಾರಾಯಣ್‌ ರಾವ್, ತನ್ನ ಮನೆಯಲ್ಲಿ ಡೇ ಕೇರ್ ನಡೆಸುತ್ತಿದ್ದ. ಹಲವು ಪೋಷಕರು, ಈತನ ಬಳಿ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದರು. ಕೆಲ ಮಕ್ಕಳು, ಶಾಲೆ ಮುಗಿಸಿ ಡೇ ಕೇರ್‌ಗೆ ಹೋಗುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಪೋಷಕರು, ಮಕ್ಕಳನ್ನು ತಮ್ಮ ಜೊತೆ ಕರೆದೊಯ್ಯುತ್ತಿದ್ದರು.

ಸಂತ್ರಸ್ತ ಬಾಲಕಿಯ ಪೋಷಕರು ಉದ್ಯೋಗದಲ್ಲಿದ್ದರು. ಬಾಲಕಿಯನ್ನು ನಿತ್ಯವೂ ಶಾಲೆಗೆ ಬಿಟ್ಟು, ಕೆಲಸಕ್ಕೆ ಹೋಗುತ್ತಿದ್ದರು. ಶಾಲೆ ಮುಗಿದ ಬಳಿಕ ಬಾಲಕಿ, ಡೇ ಕೇರ್‌ಗೆ ತೆರಳುತ್ತಿದ್ದರು. ಪೋಷಕರು ಬರುವವರೆಗೂ ಅಲ್ಲಿಯೇ ಇರುತ್ತಿದ್ದಳು.

2019ರ ಆಗಸ್ಟ್ 30ರಂದು ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಅಪರಾಧಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಗತಿ ತಿಳಿಯುತ್ತಿದ್ದಂತೆ ಪೋಷಕರು, ಠಾಣೆಗೆ ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಅಪರಾಧಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT