ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಸಿಇಟಿ, ನೀಟ್‌ ಉಚಿತ ತರಬೇತಿ

Last Updated 26 ಜೂನ್ 2020, 19:10 IST
ಅಕ್ಷರ ಗಾತ್ರ

ಬೆಂಗಳೂರು: ಸಿಇಟಿ, ನೀಟ್‌ ಮತ್ತಿತರ ಪ್ರವೇಶ ಪರೀಕ್ಷೆಗಳ ಸಿದ್ಧತೆ ನಡೆಸಲು ನೆರವಾಗಲು ದಯಾನಂದ ಸಾಗರ ವಿಶ್ವವಿದ್ಯಾಲಯವು ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಉಚಿತವಾಗಿ ಮಾರ್ಗದರ್ಶನ ನೀಡಲು ಮುಂದಾಗಿದೆ.

ವಿದ್ಯಾರ್ಥಿಗಳಲ್ಲದೆ ಪೋಷಕರು ಮತ್ತು ಶಿಕ್ಷಕರೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಜೂನ್‌ 28ರ ಬೆಳಿಗ್ಗೆ 11ಕ್ಕೆ ಈ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ನಿವೃತ್ತ ಐಎಎಸ್‌ ಅಧಿಕಾರಿ ಎಂ.ಎನ್. ವಿದ್ಯಾಶಂಕರ್‌, ಗೂಗಲ್‌ ಕಂಪನಿಯ ಭಾರತದ ಬಿಸಿನೆಸ್‌ ಹೆಡ್‌ ರುಚಿತಾ ಅಗರ್‌ವಾಲ್, ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಎನ್‌.ಬಿ. ಮೂರ್ತಿ, ಡೀನ್‌ ಡಾ.ಎ.ಸಿ. ಅಶೋಕ್‌ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಆಸಕ್ತರು ಆನ್‌ಲೈನ್‌ನಲ್ಲಿಯೇ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಗಾಗಿ www.dsu.edu.in ವೆಬ್‌ಸೈಟ್‌ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT