ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಯಾನಂದ ಸಾಗರ ಕಾಲೇಜಿನಿಂದ ಸ್ವಚ್ಛತಾ ಅಭಿಯಾನ

Last Updated 26 ಮಾರ್ಚ್ 2021, 16:03 IST
ಅಕ್ಷರ ಗಾತ್ರ

ಬೆಂಗಳೂರು: ಕುಮಾರಸ್ವಾಮಿ ಬಡಾವಣೆಯಲ್ಲಿರುವ ದಯಾನಂದ ಸಾಗರ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗವು ಬೆಂಗಳೂರಿನ ‘ಇಂಡಿಯನ್‌ ವಾಟರ್‌ ವರ್ಕ್ಸ್‌’ ಕೇಂದ್ರದ ಸಹಯೋಗದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ಎಚ್‌.ಗೊಲ್ಲಹಳ್ಳಿಯಲ್ಲಿ ಶುಕ್ರವಾರ ಗ್ರಾಮ ನೈರ್ಮಲ್ಯ ಕಾರ್ಯಕ್ರಮ ಹಮ್ಮಿಕೊಂಡಿತ್ತು.

‘ಸ್ವಚ್ಛ ಭಾರತ’ ಅಭಿಯಾನದ ಅಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಒಟ್ಟು 195 ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಕುರಿತು ಶಾಲಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯರಲ್ಲಿ ಅರಿವು ಮೂಡಿಸಲಾಯಿತು.

‘ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಒಟ್ಟು 10 ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳೆಲ್ಲಾ ಒಟ್ಟುಗೂಡಿ ಮೂರು ಕಿ.ಮೀ.ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛಗೊಳಿಸಿದರು. ಇ.ಎಸ್‌.ಐ.ಆಸ್ಪತ್ರೆಯ ವೈದ್ಯ ಡಾ.ಬಿ.ಎಸ್‌.ಸತೀಶ್‌ ಪ್ರಸಾದ್‌ ಅವರು ಆರೋಗ್ಯ ಹಾಗೂ ಶುಚಿತ್ವದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಕಾಲೇಜಿನ ವತಿಯಿಂದ ಶಾಲೆಗೆ ‘ವಾಟರ್‌ ಪ್ಯೂರಿಫಯರ್‌’ಅನ್ನು ಕೊಡುಗೆಯಾಗಿ ನೀಡಲಾಯಿತು’ ಎಂದು ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ಎಚ್‌.ಕೆ.ರಾಮರಾಜು ತಿಳಿಸಿದರು.

ದಯಾನಂದ ಸಾಗರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಸಿ.ಪಿ.ಎಸ್‌.ಪ್ರಕಾಶ್‌, ಬೆಂಗಳೂರು ದಕ್ಷಿಣ ವಲಯ–1ರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪ್ರಕಾಶ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸಿ.ಎನ್‌.ಪುಷ್ಪಲತಾ ಪರಮಶಿವಯ್ಯ ಅವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT