ಬೆಂಗಳೂರು: ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಸವಾರರ ವಿರುದ್ಧ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಗರದ ಪೂರ್ವ ಮತ್ತು ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ ಮತ್ತು ಸೋಮವಾರ ಕಾರ್ಯಾಚರಣೆ ನಡೆಸಿ, 687 ವಾಹನಗಳ ತಪಾಸಣೆ ನಡೆಸಿದರು. ನಿಯಮ ಉಲ್ಲಂಘಣೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ, ಒಟ್ಟು ₹1.65 ಲಕ್ಷ ದಂಡ ವಸೂಲು ಮಾಡಿದ್ದಾರೆ.

ಇದೇ ವೇಳೆ ಸಂಚಾರ ನಿಯಮ ಪಾಲಿಸುವಂತೆ ಸವಾರರಿಗೆ ಜಾಗೃತಿ ಮೂಡಿಸಲಾಯಿತು. ಮುಂದಿನ ದಿನಗಳಲ್ಲಿಯೂ ಸಹ ವಿಶೇಷ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.