ಭಾನುವಾರ, ಆಗಸ್ಟ್ 1, 2021
27 °C

ಜಿಲ್ಲಾಧಿಕಾರಿ ಕಚೇರಿಯಲ್ಲಿ 9 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರ ಜಿಲ್ಲಾಧಿಕಾರಿ ಕಚೇರಿಯ ಒಂಬತ್ತು ಸಿಬ್ಬಂದಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಎಲ್ಲರನ್ನೂ ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಜೊತೆ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್‌ನಲ್ಲಿ ಇರಲು ಸೂಚನೆ ನೀಡಲಾಗಿದೆ. ಕಚೇರಿಯ 134 ಸಿಬ್ಬಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀರೂಪಾ ಸೇರಿ ಎಲ್ಲಾ ಅಧಿಕಾರಿಗಳು ಪರೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ ಸೋಂಕು ಕಂಡು ಬಂದಿಲ್ಲ.

ಕಚೇರಿಗೆ ಸೋಂಕು ನಿವಾರಕ ಸಿಂಪಡಿಸಲಾಗಿದೆ. ಸೋಂಕಿಲ್ಲದ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಿದರು. ಸಿಬ್ಬಂದಿಯನ್ನು ಎರಡು ತಂಡಗಳಾಗಿ ವಿಂಗಡಿಸಿ ರೊಟೇಷನ್ ಆಧಾರದಲ್ಲಿ ಕರ್ತವ್ಯಕ್ಕೆ ಹಾಜರಾಗಲು ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು