ಮಂಗಳವಾರ, ಜೂನ್ 2, 2020
27 °C

ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಜಾರಿಗೆ ಡಿಸಿಎಂ ಅಶ್ವತ್ಥ್ ನಾರಾಯಣ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಕೋವಿಡ್- 19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಮತ್ತು ಲಾಕ್ ಡೌನ್ ಜಾರಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲಾಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಸೂಚಿಸಿದರು.

ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ಸಚಿವರೂ ಆಗಿರುವ ಅಶ್ವತ್ಥ್ ನಾರಾಯಣ, ಶನಿವಾರ ವಿಡಿಯೊ ಸಂವಾದ ನಡೆಸಿ, ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಕ್ರ‌ಮಗಳ ಬಗ್ಗೆ ಮಾಹಿತಿ ಪಡೆದರು.

ಎರಡು ದಿನಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ 10 ವೆಂಟಿಲೇಟರ್‌ಗಳನ್ನು ಸರಬರಾಜು ಮಾಡಬೇಕು. ಎನ್‌95  ಮಾಸ್ಕ್, ತ್ರಿ ಲೇಯರ್ ಮಾಸ್ಕ್, ವೈದ್ಯರ ರಕ್ಷಣಾ ಕಿಟ್‌ಗಳನ್ನು ಎರಡೂ ಜಿಲ್ಲೆಗಳಿಗೆ ತಕ್ಷಣ ಸರಬರಾಜು ಮಾಡಬೇಕು ಎಂದೂ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು