ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆವಿಷ್ಕಾರ ಮನೋಭಾವ ಬೆಳೆಸುವ ಬಿ–ಕ್ಯಾಂಪ್ ಫೆಸ್ಟ್‌: ಅಶ್ವತ್ಥನಾರಾಯಣ

Last Updated 4 ಏಪ್ರಿಲ್ 2021, 21:33 IST
ಅಕ್ಷರ ಗಾತ್ರ

ಬೆಂಗಳೂರು: ‘ಆನ್‌ಲೈನ್‌ ಮೂಲಕ ತಮ್ಮ ಆಯ್ಕೆಯ ವಿಷಯಗಳನ್ನು ಮಕ್ಕಳು ಪರಿಣಾಮಕಾರಿಯಾಗಿ ಕಲಿಯುವ, ಅವರಲ್ಲಿ ಆವಿಷ್ಕಾರ ಮನೋಭಾವ ಬೆಳೆಸುವ ಬಿ–ಕ್ಯಾಂಪ್‌ ಆ್ಯಂಡ್ ಫೆಸ್ಟ್‌ ಕಾರ್ಯಕ್ರಮವನ್ನು ರಾಜ್ಯದಲ್ಲಿಯೂ ಅಳವಡಿಸಿಕೊಳ್ಳುವ ಚಿಂತನೆ ಇದೆ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ತಿರುವನಂತಪುರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೇರಳದಲ್ಲಿಈಗಾಗಲೇ ಬಿ-ಕ್ಯಾಂಪ್‌ ಆ್ಯಂಡ್‌ ಫೆಸ್ಟ್‌ ಹೆಸರುವಾಸಿಯಾಗಿದ್ದು, ರಾಜ್ಯದ ಮಕ್ಕಳಿಗೂ ಇದರ ಉಪಯೋಗ ದೊರೆಯುವಂತೆ ಮಾಡಲಾಗುವುದು’ ಎಂದರು.

ಕೇರಳದ ಬ್ಲೂಮ್‌ಬ್ಲೂಮ್‌ ಎಂಬ ನವೋದ್ಯಮ ಇದನ್ನು ಅಭಿವೃದ್ಧಿಪಡಿಸಿದೆ. ಜಾಗತಿಕವಾಗಿ ಶೈಕ್ಷಣಿಕ ರಂಗದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡು ಇದನ್ನು ರೂಪಿಸಲಾಗಿದ್ದು, 5 ರಿಂದ 15 ವರ್ಷದೊಳಗಿನ ಮಕ್ಕಳಲ್ಲಿ ನಾವೀನ್ಯತೆಯನ್ನು ಬೆಳೆಸುವ ಉದ್ದೇಶ ಇದರದ್ದು.

ಕೇರಳದಲ್ಲಿ 500ಕ್ಕೂ ಹೆಚ್ಚು ಶಿಕ್ಷಣ ತಜ್ಞರ ಮಾರ್ಗದರ್ಶನದಲ್ಲಿ 6,000ಕ್ಕೂ ಹೆಚ್ಚು ಮಕ್ಕಳು ಇದರ ಪ್ರಯೋಜನವನ್ನು ಪಡೆದಿದ್ದಾರೆ ಎಂದು ಬ್ಲೂಮ್‌ಬ್ಲೂಮ್‌ ಪ್ರತಿನಿಧಿಗಳು ಉಪಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ವಿವರಗಳನ್ನು ತಿರುವಾಂಕೂರು ರಾಜಮನೆತನದ ಮಹಾರಾಣಿ ಪೋಯಂ ತಿರುನಾಳ್‌ ಗೌರಿಪಾರ್ವತಿ ಬಾಯಿ ಅವರು ಅಶ್ವತ್ಥನಾರಾಯಣ ಅವರಿಗೆ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT