ಶುಕ್ರವಾರ, ಜುಲೈ 1, 2022
23 °C

ಮಲ್ಲೇಶ್ವರ: ಸಾವಿರ ಮಂದಿಗೆ ಉಚಿತ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಡಾ.ಸಿ.ಎನ್.‌ಅಶ್ವತ್ಥನಾರಾಯಣ ಫೌಂಡೇಷನ್‌ ವತಿಯಿಂದ ಮಲ್ಲೇಶ್ವರ ಕ್ಷೇತ್ರದ ಶ್ರೀರಾಮಪುರ ಮತ್ತು ಸುಬ್ರಹ್ಮಣ್ಯಪುರದಲ್ಲಿ 1,000 ಮಂದಿಗೆ ಗುರುವಾರ ಉಚಿತವಾಗಿ ಲಸಿಕೆ ನೀಡಲಾಯಿತು.

ಸುಬ್ರಹ್ಮಣ್ಯಪುರದ ಬಾಲಾಜಿ ಸಮುದಾಯ ಭವನ, ಶ್ರೀರಾಮಪುರದ ಬಿಬಿಎಂಪಿ ಶಾಲೆಯಲ್ಲಿ ನಡೆದ ಲಸಿಕೆ ಅಭಿಯಾನದಲ್ಲಿ ವಿದ್ಯಾರ್ಥಿಗಳು, ಬಿಪಿಎಲ್‌ ಕಾರ್ಡ್‌ ಹೊಂದಿರುವ ಜನರಿಗೆ ಲಸಿಕೆ ನೀಡಲಾಯಿತು.

ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಎರಡೂ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಫೌಂಡೇಷನ್‌ ವತಿಯಿಂದ ಕ್ಷೇತ್ರದ ಹಲವು ಕಡೆ ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡಲಾಗಿದೆ. ಈವರೆಗೆ ಸಾವಿರ ವಿದ್ಯಾರ್ಥಿಗಳು ಸೇರಿದಂತೆ 6,000 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಯಶವಂತಪುರದಲ್ಲಿಯೂ ಲಸಿಕೆ ಆಭಿಯಾನ ನಡೆಯುತ್ತಿದ್ದು, ಅಲ್ಲಿ ಸರ್ಕಾರ ನೀಡಿರುವ ಲಸಿಕೆ ಕೊಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಅಶ್ವತ್ಥನಾರಾಯಣ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು

ʼನಮ್ಮ ಕ್ಲಿನಿಕ್‌ʼ ಮಾಲೀಕ ಡಾ.ಸೂರಜ್‌, ಭೌಜೋತ್ ಈ ಲಸಿಕೆ ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು