ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದ ಆವರಣದಲ್ಲಿ ಅಂದಾಜು 25ರಿಂದ 30 ವರ್ಷ ವಯೋಮಾನದ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಆವರಣದಲ್ಲಿದ್ದ ಪ್ಲಾಸ್ಟಿಕ್ ಡ್ರಮ್ನಲ್ಲಿ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ.

‘ಮೃತದೇಹಕ್ಕೆ ಪ್ಲಾಸ್ಟಿಕ್ ಸುತ್ತಿ ತಂದು ಹಾಕಲಾಗಿದೆ. 10 ದಿನಗಳ ಹಿಂದೆ ತಂದು ಹಾಕಿರುವ ಸಾಧ್ಯತೆ ಇದೆ. ರೈಲು ನಿಲ್ದಾಣದ ಸಿಬ್ಬಂದಿ ಕಳೆದ ಕೆಲವು ದಿನಗಳಿಂದ ಪ್ಲಾಸ್ಟಿಕ್ ಡ್ರಮ್ ಪರಿಶೀಲನೆ ನಡೆಸಿರಲಿಲ್ಲ.

ಬುಧವಾರ ಮಧ್ಯಾಹ್ನ ಕೊಳೆತ ವಾಸನೆ ಬರುವುದನ್ನು ಗಮನಿಸಿದ ರೈಲು ನಿಲ್ದಾಣದ ಸಿಬ್ಬಂದಿ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಅವರು ನಮಗೆ ಮಾಹಿತಿ ನೀಡಿದ ಮೇರೆಗೆ ಪರಿಶೀಲನೆ ನಡೆಸಲಾಯಿತು.

ಡಿಸೆಂಬರ್ 26ರಿಂದ ಇರುವ ಎಲ್ಲ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದೆ. ಯಾವುದೇ ಸುಳಿವು ಪತ್ತೆಯಾಗಿಲ್ಲ’ ಎಂದು ರೈಲ್ವೆ ಎಸ್ಪಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.