ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ ಸಿಟಿ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್‌ವರೆಗೆ ಗಡುವು: ರಾಕೇಶ್ ಸಿಂಗ್

Last Updated 24 ಫೆಬ್ರುವರಿ 2022, 7:37 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಅವೆನ್ಯೂ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ನಡೆಯುತ್ತಿರುವ ಕಾಮಗಾರಿ ಯನ್ನು ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಅಧ್ಯಕ್ಷ ರಾಕೇಶ್ ಸಿಂಗ್ ಅವರು ಗುರುವಾರ ಬೆಳಿಗ್ಗೆ ಪರಿಶೀಲಿಸಿದರು.

ಮೈಸೂರು ಬ್ಯಾಂಕ್ ವೃತ್ತದಿಂದ ಎಸ್ ಜೆ ಪಿ ರಸ್ತೆಯನ್ನು ಸಂಪರ್ಕಿಸುವ ಸುಮಾರು 1.02 ಕಿ.ಮೀ ಉದ್ದದ ಈ ರಸ್ತೆಯ ಎರಡೂ ಬದಿಗಳಲ್ಲಿ ಕುಡಿಯುವ ನೀರಿನ ಕೊಳವೆಗಳನ್ನು ಅಳವಡಿಸಬೇಕಾಗಿದ್ದು, ನಂತರ ಪಾದಚಾರಿ ಮಾರ್ಗವನ್ನು ನಿರ್ಮಿಸಬೇಕಾಗಿದೆ. ಜಲಮಂಡಳಿ ಕೋರಿಕೆ ಮೇರೆಗೆ ನಡೆಯುತ್ತಿರುವ ಈ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ರಾಕೇಶ್ ಸಿಂಗ್ ಸೂಚಿಸಿದರು.

ಸಾರ್ವಜನಿಕರ ಓಡಾಟಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ಹಗಲು ರಾತ್ರಿ ಕೆಲಸ ನಿರ್ವಹಿಸಿ ಕಾಮಗಾರಿಗಳನ್ನು ಗಡುವಿನೊಳಗೆ ಮುಗಿಸುವಂತೆ ಸೂಚಿಸಿದರು.

ಸ್ಥಳೀಯ ವರ್ತಕರೊಂದಿಗೆ ಚರ್ಚೆ:ಅವೆನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದ ಸುಂದರೀಕರಣ, ಅಗ್ನಿಶಾಮಕ ಘಟಕಗಳ ಸ್ಥಾಪನೆ, ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡುವಂತೆ ಹಾಗೂ ಪಾದಚಾರಿ ಮಾರ್ಗದ ಅಭಿವೃದ್ಧಿಗೆ ತ್ವರಿತವಾಗಿ ಕ್ರಮ ಕೈಗೊಳ್ಲುವಂತೆ ಸ್ಥಳೀಯ ವರ್ತಕರು ಒತ್ತಾಯಿಸಿದರು.‌ ಇದಕ್ಕೆ ಸ್ಪಂದಿಸಿದ ರಾಕೇಶ್ ಸಿಂಗ್, ಈ ಕುರಿತು ಕೂಡಲೇ‌ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆ ವೇಳೆ ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಮುಖ್ಯ ಎಂಜಿನಿಯರ್ ವಿನಾಯಕ ಸೂಗೂರ್, ಬಿಬಿಎಂಪಿಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಬಸವರಾಜ್ ಕಬಾಡೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT