ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಕೋವಿಡ್-19 ಸಾವು ಪ್ರಕರಣ: ಬಿಬಿಎಂಪಿ ಸ್ಪಷ್ಟನೆ

Last Updated 3 ಸೆಪ್ಟೆಂಬರ್ 2020, 18:07 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2020ರಲ್ಲಿ ಜನವರಿಯಿಂದ ಜುಲೈ ಅಂತ್ಯದವರೆಗೆ ದಾಖಲಾಗಿರುವುದು 35,307 ಸಾವು ಪ್ರಕರಣಗಳು ಮಾತ್ರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ.

‘ಬೆ೦ಗಳೂರು ನಗರದಲ್ಲಿ 2020ರ ಜನವರಿಯಿಂದ ಜುಲೈವರೆಗೆ 49,135 ಸಾವು ಪ್ರಕರಣಗಳು ವರದಿಯಾಗಿವೆ. ಆದರೆ ಕಳೆದ ವರ್ಷದ ಇದೇ ಅವಧಿಯಲ್ಲಿ 37,001 ಸಾವು ಪ್ರಕರಣಗಳು ವರದಿಯಾಗಿದ್ದವು. ಅ೦ದರೆ, 12,134 ಪ್ರಕರಣಗಳು ಹೆಚ್ಚುವರಿಯಾಗಿ ವರದಿಯಾಗಿವೆ’ ಎಂದು ಶಾಸಕ ಎಚ್‌.ಕೆ.ಪಾಟೀಲ ಅವರು ಹೇಳಿಕೆಯಲ್ಲಿ ಇತ್ತೀಚೆಗೆ ತಿಳಿಸಿದ್ದರು.

ಈ ಮಾಹಿತಿಯನ್ನು ಅಲ್ಲಗಳೆದಿರುವ ಬಿಬಿಎಂಪಿ, 2020ರ ಜನವರಿಯಿಂದ ಜುಲೈ ಅಂತ್ಯದವರೆಗೆ ದಾಖಲಾದ ಸಾವು ಪ್ರಕರಣಗಳ ತಿಂಗಳುವಾರು ವಿವರವನ್ನು ಹಾಗೂ 2019ರಲ್ಲಿ ಇದೇ ಅವಧಿಯಲ್ಲಿ ದಾಖಲಾದ ಸಾವು ಪ್ರಕರಣಗಳ ವಿವರವನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ, ಕಳೆದ ವರ್ಷದ ಅಂಕಿ–ಅಂಶಗಳಿಗೆ (37,004) ಹೋಲಿಸಿದರೆ ಸಾವಿನ ಸಂಖ್ಯೆ 1,697ರಷ್ಟು ಕಡಿಮೆಯಾಗಿದೆ.

‘ಜನನ ಮರಣಗಳ ಮುಖ್ಯ ನೋಂದಣಾಧಿಕಾರಿ ಕಚೇರಿಯ ‘ಇ-ಜನ್ಮ’ ತಂತ್ರಾಂಶದಲ್ಲಿ ಪರಿಶೀಲಿಸಿದಾಗ 2020ರಲ್ಲಿ ಜುಲೈ ಅಂತ್ಯದವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 35,307 ಸಾವು ಪ್ರಕರಣಗಳು ದಾಖಲಾಗಿವೆ. ಎಚ್‌.ಕೆ.ಪಾಟೀಲ ಅವರಿಗೆ ಯಾವ ಮೂಲಗಳಿಂದ ಮಾಹಿತಿ ದೊರಕಿದೆ ಎಂದು ನಮಗೆ ತಿಳಿದಿಲ್ಲ’ ಎಂದು ಬಿಬಿಎಂಪಿಯ ಜಂಟಿ ನಿರ್ದೇಶಕರು (ಸಾಂಖ್ಯಿಕ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT