ಬೆಂಗಳೂರು: ಖ್ಯಾತ ಆರ್ಥಿಕ ತಜ್ಞ ಡಾ.ಜಿ.ತಿಮ್ಮಯ್ಯ (84) ಅವರು ನಗರದಲ್ಲಿ ಶನಿವಾರ ನಿಧನರಾದರು.

ತಿಮ್ಮಯ್ಯ ಅವರು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ (ಐಎಸ್‌ಇಸಿ) ಅಧ್ಯಕ್ಷ ಮತ್ತು ನಿರ್ದೇಶ ಕರಾಗಿ ಕಾರ್ಯನಿರ್ವಹಿಸಿದ್ದರು. ಜತೆಗೆ, ಕರ್ನಾಟಕ ಹಣಕಾಸು ಆಯೋಗದ ಅಧ್ಯಕ್ಷ ಮತ್ತು ರಾಜ್ಯ ಯೋಜನಾ ಮಂಡಳಿ ಮತ್ತು ರಾಷ್ಟ್ರೀಯ ಯೋಜನಾ ಆಯೋಗದ ಸದಸ್ಯರಾಗಿದ್ದರು.

ಬಾಂಬೆ, ಮೈಸೂರು ಮತ್ತು ಬೆಂಗ ಳೂರು ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡಿದ್ದ ಅವರು, 1987ರಿಂದ 1994ರವರೆಗೆ ಕರ್ನಾಟಕ ಸರ್ಕಾರದ ಆರ್ಥಿಕ ಸಲಹೆಗಾರರಾಗಿದ್ದರು.

ಬಾಂಬೆ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿದ್ದ ಡಾ.ಜಿ. ತಿಮ್ಮಯ್ಯ ಅವರು, 16 ಪುಸ್ತಕ ಗಳು ಮತ್ತು ಹಲವಾರು ಸಂಶೋ ಧನಾ ಪ್ರಬಂಧಗಳನ್ನು ಪ್ರಕಟಿಸಿದ್ದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2012ರಲ್ಲಿ ಇವರಿಗೆ ಗೌರವ ಡಾಕ್ಟರೇಟ್ ನೀಡಿತ್ತು.

ತಿಮ್ಮಯ್ಯ ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.