ಮಂಗಳವಾರ, ಆಗಸ್ಟ್ 3, 2021
28 °C

ಕಲಾವಿದ ಕಬ್ಬಡ್ಡಿ ರಾಮಚಂದ್ರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಂಗಭೂಮಿ ಕಲಾವಿದ ಹಾಗೂ ಸಂಘಟಕ ಕಬ್ಬಡ್ಡಿ ರಾಮಚಂದ್ರ (64) ಅವರು ಶನಿವಾರ ನಿಧನರಾದರು. 

ಕೆಲ ದಿನಗಳ ಹಿಂದಷ್ಟೇ ಅವರಿಗೆ ಮಿದುಳಿನ ಗೆಡ್ಡೆ (ಬ್ರೈನ್ ಟ್ಯೂಮರ್) ತೆರವಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇಸ್ರೊ ಬಡಾವಣೆಯ ವಸಂತಪುರದ ತಮ್ಮ ನಿವಾಸದಲ್ಲಿ ಬೆಳಿಗ್ಗೆ 10 ಗಂಟೆಗೆ ಅವರು ಮೃತಪಟ್ಟರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅವರ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಚಾಮರಾಜಪೇಟೆಯ ಟಿ.ಆರ್.ಮಿಲ್ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

ರಾಮಚಂದ್ರ ಅವರು ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದರು. ಸಾಮಾಜಿಕ ಸಂದೇಶ ಸಾರುವ ನಾಟಕಗಳಲ್ಲಿ ಅವರು ಹೆಚ್ಚಾಗಿ ಅಭಿನಯಿಸಿದ್ದರು. ಕಲಾವಿದರ ಬಳಗ ಟ್ರಸ್ಟ್‌ನ ಸಂಸ್ಥಾಪನಾ ಅಧ್ಯಕ್ಷರಾಗಿದ್ದ ಅವರು, ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿದ್ದರು. ನಾಟಕ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ವಿವಿಧ ಖಾಸಗಿ ಸಂಘ–ಸಂಸ್ಥೆಗಳ ಪ್ರಶಸ್ತಿಗಳು ಅವರಿಗೆ ಸಂದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು