ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ವಶದಲ್ಲಿದ್ದ ಆಫ್ರಿಕಾ ಪ್ರಜೆ ಸಾವು; ಪ್ರತಿಭಟನೆ, ಲಾಠಿ ಪ್ರಹಾರ

Last Updated 2 ಆಗಸ್ಟ್ 2021, 15:04 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆಯೊಬ್ಬರು ಮೃತಪಟ್ಟ ಘಟನೆ ಖಂಡಿಸಿ ಜೆ.ಸಿ.ನಗರ ಠಾಣೆ ಎದುರು ಕೆಲ ಆಫ್ರಿಕಾ ಪ್ರಜೆಗಳು ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು. ಇದೇ ವೇಳೆಯೇ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು.

ಜೆ.ಸಿ.ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆಫ್ರಿಕಾ ಪ್ರಜೆಯನ್ನು ವಶಕ್ಕೆ ಪಡೆದಿದ್ದರು. ಅವರ ಬಳಿ 5 ಗ್ರಾಂ ಎಂಡಿಎಂಎ ಪತ್ತೆಯಾಗಿತ್ತು ಎನ್ನಲಾಗಿದೆ.

ಆರೋಪಿಯನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದರು. ಅದೇ ವೇಳೆಯೇ ಆಫ್ರಿಕಾ‌ ಪ್ರಜೆಗೆ ಎದೆನೋವು ಕಾಣಿಸಿಕೊಂಡಿತ್ತು. ಪೊಲೀಸರು ಅವರನ್ನು ಚಿರಾಯು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ. ಈ ಸಾವಿನ ಬಗ್ಗೆ ಸಿಐಡಿ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

ಮೃತಪಟ್ಟ ಆಫ್ರಿಕಾ ಪ್ರಜೆ
ಮೃತಪಟ್ಟ ಆಫ್ರಿಕಾ ಪ್ರಜೆ

ಠಾಣೆ ಎದುರು ಗುಂಪು: ‘ಪೊಲೀಸರ ಕಿರುಕುಳದಿಂದ ಆಫ್ರಿಕಾ ಪ್ರಜೆ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದ ಕೆಲವರು ಠಾಣೆ ಎದುರು ಗುಂಪು ಸೇರಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ, ಪ್ರತಿಭಟನಾಕಾರರ ಮನವೋಲಿಸಲು ಯತ್ನಿಸಿದ್ದರು.

ಅದಕ್ಕೆ ಒಪ್ಪದ ಪ್ರತಿಭಟನಾಕಾರರು, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾದರು. ಅದೇ ಸಂದರ್ಭದಲ್ಲೇ ಪೊಲೀಸರು, ಲಾಠಿ ಪ್ರಹಾರ ಮಾಡಿದರು. ಸದ್ಯ 25ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT